ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯ ಪಕ್ಷಗಳಿಗೆ ಮುಸ್ಲಿಂ ಮತಗಳು ಬೇಕು, ನಾಯಕತ್ವ ಬೇಡ: ಇಮ್ತಿಯಾಜ್ ಜಲೀಲ್

Published 4 ಮೇ 2024, 13:09 IST
Last Updated 4 ಮೇ 2024, 13:09 IST
ಅಕ್ಷರ ಗಾತ್ರ

ಛತ್ರಪತಿ ಸಂಭಾಜಿನಗರ: ಎಲ್ಲಾ ರಾಜಕೀಯ ಪಕ್ಷಗಳಿಗೆ ಮುಸ್ಲಿಂ ಸಮುದಾಯದ ಮತಗಳು ಬೇಕು ಆದರೆ ಅವರ ನಾಯಕತ್ವ ಬೇಡ ಎಂದು ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಸಂಸದ ಇಮ್ತಿಯಾಜ್ ಜಲೀಲ್ ಹೇಳಿದ್ದಾರೆ.

ಛತ್ರಪತಿ ಸಂಭಾಜಿನಗರದ ಸಜಾಪುರದಲ್ಲಿ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಜಲೀಲ್, ದೇಶದ 11 ರಾಜ್ಯಗಳ ಲೋಕಸಭೆ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದಿಂದ ಯಾರನ್ನೂ ಕಣಕ್ಕಿಳಿಸಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

‘ಮಹಾರಾಷ್ಟ್ರದಲ್ಲಿ ಪ್ರಮುಖ ರಾಜಕೀಯ ಪಕ್ಷಗಳು ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ. ಅಲ್ಲದೆ, ಮುಸ್ಲಿಂಮರಿಗೆ ಉಮೇದುವಾರಿಕೆ ನೀಡದ 11 ರಾಜ್ಯಗಳಿವೆ. ಗುಜರಾತ್‌, ರಾಜಸ್ಥಾನ, ಗೋವಾ ಮತ್ತು ದೆಹಲಿಯಲ್ಲಿ ಯಾವುದೇ ಮುಸ್ಲಿಂ ಸಂಸದರಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾವು ಚುನಾವಣೆಯಲ್ಲಿ ಸ್ಪರ್ಧಿಸದೇ ಇದ್ದರೆ ಗೆಲ್ಲುವುದು ಹೇಗೆ?, 2019ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ನಗರದ ಮುಖಂಡರು ನಾನು ಗೆಲ್ಲುವುದಿಲ್ಲ ಎಂದು ಹೇಳಿದ್ದರು. ಆದರೆ, ಜನ ನಮ್ಮೊಂದಿಗೆ ಇದ್ದರು. ನಾನು ಗೆಲುವು ಸಾಧಿಸಿದೆ ಎಂದು ತಿಳಿಸಿದ್ದಾರೆ.

ಈ ಬಾರಿಯ ಲೋಕಸಭೆ ಚುನಾವಣೆಗೆ ಛತ್ರಪತಿ ಸಂಭಾಜಿನಗರದಿಂದ (ಹಿಂದಿನ ಔರಂಗಬಾದ್‌) ಜಲೀಲ್‌ ಸ್ಪರ್ಧಿಸುತ್ತಿದ್ದಾರೆ. ಮೇ 13ರಂದು ನಾಲ್ಕನೇ ಹಂತದಲ್ಲಿ ಮತದಾನ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT