ನವದೆಹಲಿ: ಈಶಾನ್ಯ ರಾಜ್ಯಗಳಾದ ತ್ರಿಪುರ, ನಾಗಾಲ್ಯಾಂಡ್ ಮತ್ತು ಮೇಘಾಲಯ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗವು ಜನವರಿ 19 ರೊಳಗೆ ಪ್ರಕಟಿಸುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಸೋಮವಾರ ಮಾಹಿತಿ ನೀಡಿದ್ದಾರೆ.

‘ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ನೇತೃತ್ವದ ಚುನಾವಣಾ ಆಯೋಗವು ಕಳೆದ ವಾರ (ಜನವರಿ 11 ರಿಂದ 14) ಈಶಾನ್ಯದ ಮೂರು ರಾಜ್ಯಗಳಿಗೆ ಭೇಟಿ ನೀಡಿತ್ತು. ರಾಜಕೀಯ ಪಕ್ಷಗಳು ಮತ್ತು ರಾಜ್ಯ, ಕೇಂದ್ರ ಭದ್ರತೆ ಮತ್ತು ನಾಗರಿಕ ಸೇವಾ ಅಧಿಕಾರಿಗಳೊಂದಿಗೆ ಸರಣಿ ಸಭೆಗಳನ್ನು ನಡೆಸಿತು’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ವಿಶೇಷವಾಗಿ ಮೂರು ರಾಜ್ಯಗಳ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಆಯಾ ರಾಜ್ಯಗಳ ರಾಜಧಾನಿಗಳಲ್ಲಿ ಭೇಟಿಯಾಗಿ ಸಮಾಲೋಚನೆ ಮಾಡಲಾಗಿದೆ’ ಎಂದು ಅವರು ಹೇಳಿದರು.

‘ಚುನಾವಣಾ ಆಯೋಗವು ದೆಹಲಿಯಲ್ಲಿ ಶೀಘ್ರವೇ ಸಭೆ ಸೇರಲಿದೆ. ನಂತರ ಗುರುವಾರದ ವೇಳೆಗೆ ಮೂರು ಈಶಾನ್ಯ ರಾಜ್ಯಗಳ ವಿಧಾನಸಭಾ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಯಿದೆ" ಎಂದು ಅಧಿಕಾರಿಯ ಮಾಹಿತಿ ಉಲ್ಲೇಖಿಸಿ ಐಎಎನ್ಎಸ್ ವರದಿ ಮಾಡಿದೆ.

ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ವಿಧಾನಸಭೆಗಳ ಐದು ವರ್ಷಗಳ ಅವಧಿಯು ಕ್ರಮವಾಗಿ ಮಾರ್ಚ್ 12, ಮಾರ್ಚ್ 15 ಮತ್ತು ಮಾರ್ಚ್ 22 ರಂದು ಕೊನೆಗೊಳ್ಳಲಿದೆ ಮತ್ತು ಆ ಅವಧಿಗೆ ಮೊದಲು, ಹೊಸ ವಿಧಾನಸಭೆ ಅಸ್ತಿತ್ವಕ್ಕೆ ಬರಬೇಕಿದೆ.

ಇವುಗಳನ್ನೂ ಓದಿ

2 ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಓವೈಸಿ ಹೆಸರು: ನಿಯಮ ಉಲ್ಲಂಘನೆ ಎಂದ ಕಾಂಗ್ರೆಸ್

ವಾಸಸ್ಥಳದಿಂದಲೇ ಮತದಾನಕ್ಕೆ ವಲಸಿಗರಿಗೆ ಅವಕಾಶ: ಚುನಾವಣಾ ಆಯೋಗ

ಚುನಾವಣೆ: ಜಾಲತಾಣಗಳಲ್ಲಿನ ನಕಲಿ ಪ್ರಚಾರವೇ ಸವಾಲು –ರಾಜೀವ್ ಕುಮಾರ್

ಬಿಜೆಪಿಗೆ 1 ವರ್ಷದಲ್ಲಿ ಬರೋಬ್ಬರಿ ₹615 ಕೋಟಿ ದೇಣಿಗೆ: ಕಾಂಗ್ರೆಸ್ಗೆ ಎಷ್ಟು?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.