ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌ ಚುನಾವಣೆ: 93 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಬಿರುಸು

Last Updated 5 ಡಿಸೆಂಬರ್ 2022, 3:58 IST
ಅಕ್ಷರ ಗಾತ್ರ

ಅಹಮದಾಬಾದ್‌:ಗುಜರಾತ್‌ ವಿಧಾನಸಭಾ ಚುನಾವಣಾ ಸಮರ ಅಂತಿಮ ಹಂತ ತಲುಪಿದ್ದು, 2ನೇ ಹಂತದಲ್ಲಿ 14 ಜಿಲ್ಲೆಗಳ 93 ವಿಧಾನಸಭಾ ಕ್ಷೇತ್ರಗಳಲ್ಲಿಮತದಾನ ನಡೆಯುತ್ತಿದೆ.

ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದ್ದು ಸಂಜೆ 6 ಗಂಟೆಯವರೆಗೂ ಮತದಾನ ನಡೆಯಲಿದೆ. ಶಾಂತಿಯುತ ಮತದಾನಕ್ಕೆ ಗುಜರಾತ್‌ ಪೊಲೀಸರು ವ್ಯಾಪಕ ಬಂದೋಬಸ್ತ್‌ ಮಾಡಿಕೊಂಡಿದ್ದಾರೆ.

ಅಹಮದಾಬಾದ್‌, ವಡೋದರ, ಜಟ್ಲಾಪುರ ಸೇರಿದಂತೆ ವಿವಿಧ ಕಡೆಗಳಲ್ಲಿ ಮತದಾನ ಆರಂಭವಾಗಿದೆ. ಜನರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ. ಶಾಂತಿಯುತವಾಗಿ ಮತದಾನ ನಡೆಯುತ್ತಿದೆ ಎಂದು ವರದಿಯಾಗಿದೆ.

2ನೇ ಹಂತದಲ್ಲಿ 2.51 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಅದರಲ್ಲಿ 1.29 ಕೋಟಿ ಪುರುಷರು ಮತ್ತು 1.22 ಕೋಟಿ ಮಹಿಳಾ ಮತದಾರರು. ಒಟ್ಟು 14,975 ಮತದಾನ ಕೇಂದ್ರಗಳಲ್ಲಿ ಮತದಾನ ನಡೆಯುತ್ತಿದೆ.

2ನೇ ಹಂತದಲ್ಲಿ 61 ರಾಜಕೀಯ ಪಕ್ಷಗಳ 833 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿ ಮತ್ತು ಅರವಿಂದ್‌ ಕೇಜ್ರಿವಾಲ್‌ ಅವರ ಆಮ್‌ ಆದ್ಮಿ ಪಕ್ಷ ಎಲ್ಲ 91 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಕಾಂಗ್ರೆಸ್‌ 90 ಕ್ಷೇತ್ರಗಳಲ್ಲಿ ಕಣದಲ್ಲಿದ್ದರೆ, ಅದರ ಮಿತ್ರ ಪಕ್ಷ ಎನ್‌ಸಿಪಿ 2 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಅಹಮದಾಬಾದ್‌, ವಡೋದರ, ಗಾಂಧಿನಗರ ಮತ್ತು ಇತರ ಜಿಲ್ಲೆಗಳಲ್ಲಿ ಬಿರುಸಿನ ಸ್ಪರ್ಧೆಯಿದೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ವಿರಂಗಮದಿಂದ ಕಣದಲ್ಲಿದ್ದಾರೆ. ಹಾರ್ದಿಕ್‌ ಪಟೇಲ್‌, ಅಲ್ಪೇಶ್‌ ಠಾಕೂರ್‌ , ಜಿಗ್ನೇಶ್‌ ಮೇವಾನಿ, ವಿಧಾನ ಸಭೆಯಲ್ಲಿ ವಿಪಕ್ಷ ನಾಯಕ ಸುಖ್‌ರಾಂ ರಥ್ವ ಸ್ಪರ್ಧೆಯಲ್ಲಿರುವ ಪ್ರಮುಖರು.

2017ರ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಈ ಕ್ಷೇತ್ರಗಳಲ್ಲಿ 51 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್‌ 39 ಹಾಗೂ ಇತರರು 3 ಸ್ಥಾನ ಪಡೆದುಕೊಂಡಿದ್ದರು.

ಡಿಸೆಂಬರ್‌ 8ರಂದ ಮತ ಎಣಿಕೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT