ಶುಕ್ರವಾರ, 21 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಸ್ಸಾಂ ವಿಧಾನಸಭೆ ಚುನಾವಣೆ: ಬಂದೋಬಸ್ತ್‌ನಲ್ಲಿ ಮೊದಲ ಹಂತದ ಮತದಾನ

47 ಸ್ಥಾನಗಳಲ್ಲಿ ಚುನಾವಣೆ: ಹಲವೆಡೆ ತ್ರಿಕೋನ ಸ್ಪರ್ಧೆ
Last Updated 27 ಮಾರ್ಚ್ 2021, 5:28 IST
ಅಕ್ಷರ ಗಾತ್ರ

ಗುವಾಹಟಿ: ಅಸ್ಸಾಂ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಶನಿವಾರ ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿದೆ.

47 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, 23 ಮಹಿಳೆಯರು ಸೇರಿದಂತೆ 264 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 12 ಜಿಲ್ಲೆಗಳಲ್ಲಿನ 11,537 ಮತಗಟ್ಟೆಗಳಲ್ಲಿ ಜನರು ಮತದಾನ ಮಾಡುತ್ತಿದ್ದು, ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು ಹೆಚ್ಚಿಸಲಾಗಿದೆ.

ಬಹುತೇಕ 47 ಸ್ಥಾನಗಳಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಆಡಳಿತಾರೂಢ ಬಿಜೆಪಿ–ಎಜಿಪಿ ಮೈತ್ರಿಕೂಟ, ಕಾಂಗ್ರೆಸ್‌ ನೇತೃತ್ವದ ವಿರೋಧ ಪಕ್ಷಗಳ ಮೈತ್ರಿಕೂಟ ಹಾಗೂ ಹೊಸದಾಗಿ ರಚನೆಯಾದ ಅಸ್ಸಾಂ ಜತಿಯಾ ಪರಿಷತ್‌ (ಎಜೆಪಿ) ನಡುವೆ ಸ್ಪರ್ಧೆ ನಡೆಯುತ್ತಿದೆ.

ಆಡಳಿತಾರೂಢ ಬಿಜೆಪಿ 39 ಹಾಗೂ ಎಜಿಪಿ 10 ಸ್ಥಾನಗಳಲ್ಲಿ ಸ್ಪರ್ಧಿಸಿವೆ. ಎರಡು ಕ್ಷೇತ್ರಗಳಲ್ಲಿ ಈ ಪಕ್ಷಗಳು ‘ಸ್ನೇಹ’ದಿಂದ ಸ್ಪರ್ಧಿಸಿವೆ ಎಂದು ಮುಖಂಡರು ತಿಳಿಸಿದ್ದಾರೆ.

43 ಸ್ಥಾನಗಳಲ್ಲಿ ಕಾಂಗ್ರೆಸ್‌ ಸ್ಪರ್ಧಿಸಿದ್ದು, ಎಐಯುಡಿಎಫ್‌, ಸಿಪಿಐ (ಎಂಎಲ್‌–ಎಲ್‌), ಆರ್‌ಜೆಡಿಎ ಮತ್ತು ಅಂಚಾಲಿಕ್‌ ಗಣ ಮೋರ್ಚಾ ತಲಾ ಒಂದು ಸ್ಥಾನಗಳಲ್ಲಿ ಸ್ಪರ್ಧಿಸಿವೆ. ಎಜೆಪಿ 41 ಸ್ಥಾನಗಳಲ್ಲಿ ಸ್ಪರ್ಧಿಸಿದೆ.

ಅಸ್ಸಾಂ ಮುಖ್ಯಮಂತ್ರಿ ಸರ್ವಾನಂದ ಸೋನೊವಾಲ್‌ ಮುಜುಲಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

81.09 ಲಕ್ಷ ಮತದಾರರು ಮೊದಲ ಹಂತದಲ್ಲಿ ಮತ ಚಲಾಯಿಸಲಿದ್ದಾರೆ. ಇವರಲ್ಲಿ 40.77 ಲಕ್ಷ ಪುರುಷರು ಮತ್ತು 40.32 ಲಕ್ಷ ಮಹಿಳೆಯರು ಸೇರಿದ್ದಾರೆ. ಜತೆಗೆ 124 ಮತದಾರರು ತೃತೀಯ ಲಿಂಗಿಗಳು ಇದ್ದಾರೆ.

479 ಮತಗಟ್ಟೆಗಳಲ್ಲಿ ಮಹಿಳಾ ಮತಗಟ್ಟೆ ಅಧಿಕಾರಿಗಳೇ ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

126 ಸದಸ್ಯರನ್ನು ಒಳಗೊಂಡ ಅಸ್ಸಾಂ ವಿಧಾನಸಭೆಗೆ ಮೂರು ಹಂತಗಳಲ್ಲಿ ಚುನಾವಣೆ ನಡೆಯುತ್ತಿದೆ. ಮೇ 2ರಂದು ಮತ ಎಣಿಕೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT