ನವದೆಹಲಿ: ವಾಯುಮಾಲಿನ್ಯ ತಡೆಗಟ್ಟಲು ಮೂರು ವಾರಗಳ ಒಳಗಾಗಿ ಕ್ರಮ ಕೈಗೊಳ್ಳುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳು, ವಾಯು ಗುಣಮಟ್ಟ ನಿರ್ವಹಣಾ ಆಯೋಗ (ಸಿಎಕ್ಯುಎಂ) ಮತ್ತು ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿಗೆ (ಸಿಪಿಸಿಬಿ) ಸುಪ್ರೀಂ ಕೋರ್ಟ್ ಬುಧವಾರ ನಿರ್ದೇಶನ ನೀಡಿದೆ.

ಚಳಿಗಾಲದಲ್ಲಿ ವಾಯು ಮಾಲಿನ್ಯ ಹೆಚ್ಚುವ ಕಾರಣ ಈ ನಿರ್ದೇಶನ ನೀಡಿದೆ.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳು, ಸಿಎಕ್ಯುಎಂ, ಸಿಪಿಸಿಬಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ನಡೆಸುವ ಕುರಿತು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿ, ವಿಳಂಬ ನೀತಿ ಅನುಸರಿಸುತ್ತಿರುವ ಸಂಸ್ಥೆಗಳನ್ನು ತರಾಟೆಗೆ ತೆಗೆದುಕೊಂಡಿತು.

ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್ ಅವರನ್ನು ಒಳಗೊಂಡ ನ್ಯಾಯಪೀಠವು, ಉತ್ತರ ಪ್ರದೇಶ, ಹರಿಯಾಣ, ರಾಜಸ್ಥಾನ ಮತ್ತು ಪಂಜಾಬ್ ಮಾಲಿನ್ಯ ನಿಯಂತ್ರಣ ಮಂಡಳಿಗಳು, ಸಿಎಕ್ಯುಎಂ ಮತ್ತು ಸಿಪಿಸಿಬಿಗಳಿಗೆ ಮೂರು ತಿಂಗಳ ಒಳಗಾಗಿ ನೇಮಕಾತಿ ನಡೆಸುವಂತೆ ಸೂಚಿಸಿತು.

ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ರಾಜಸ್ಥಾನ ಮಾಲಿನ್ಯ ನಿಯಂತ್ರಣ ಮಂಡಳಿಗಳಲ್ಲಿ ಕ್ರಮವಾಗಿ 44, 43, 166 ಮತ್ತು 259 ಹುದ್ದೆಗಳು ಖಾಲಿ ಇವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.