ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಒಡಿಶಾದ ಖ್ಯಾತ ಗಾಯಕಿ ರುಕ್ಸಾನಾ ಬಾನೊ ನಿಧನ

Published : 20 ಸೆಪ್ಟೆಂಬರ್ 2024, 3:25 IST
Last Updated : 20 ಸೆಪ್ಟೆಂಬರ್ 2024, 3:25 IST
ಫಾಲೋ ಮಾಡಿ
Comments

ಭುವನೇಶ್ವರ: ಒಡಿಶಾದ ಖ್ಯಾತ ಗಾಯಕಿ ರುಕ್ಸಾನಾ ಬಾನೊ ನಿಧನರಾಗಿದ್ದಾರೆ. ಅವರಿಗೆ 27 ವರ್ಷ ವಯಸ್ಸಾಗಿತ್ತು. 

ರುಕ್ಸಾನಾ ಳೆದ 15 ದಿನಗಳಿಂದ ಇಲ್ಲಿನ ಏಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಎರಡು ವಾರಗಳ ಹಿಂದೆ ಚಿತ್ರಿಕರಣವೊಂದರಲ್ಲಿ ಅವರು ಭಾಗವಹಿಸಿದ್ದರು. ಈ ವೇಳೆ ಸ್ವಲ್ಪ ಜ್ಯೂಸ್ ಕುಡಿದ ನಂತರ ಅನಾರೋಗ್ಯಕ್ಕೆ ಒಳಗಾಗಿದ್ದರು. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. 

ರುಕ್ಸಾನಾಗೆ ವಿಷ ಹಾಕಿ ಹತ್ಯೆ ಮಾಡಲಾಗಿದೆ ಎಂದು ಅವರ ಕುಟುಂಬದವರು ಆರೋಪ ಮಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಸುವಂತೆ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT