ಬೆಂಗಳೂರು: ಸಂಸದೀಯ ಕಾರ್ಯದರ್ಶಿಗಳ ಹುದ್ದೆಗೆ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರನ್ನು ನೇಮಿಸಿದ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (ಪಿಐಎಲ್) ಸಂಬಂಧಿಸಿದಂತೆ ಅಡ್ವೊಕೇಟ್ ಜನರಲ್ ಅವರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಕುರಿತಂತೆ ವಿಜಯನಗರ ನಿವಾಸಿ ಎಂ.ಬಿ.ಆದಿನಾರಾಯಣ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ಹಾಗೂ ನ್ಯಾಯಮೂರ್ತಿ ಎಚ್. ಟಿ. ನರೇಂದ್ರ ಪ್ರಸಾಸದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರಣೆ ನೀಡುವಂತೆ ಸೂಚಿಸಿದ ನ್ಯಾಯಪೀಠ ನೋಟಿಸ್ ಜಾರಿಗೆ ಆದೇಶಿಸಿ ವಿಚಾರಣೆ ಮುಂದೂಡಿತು.

ಪ್ರಕರಣವೇನು?: ಶಾಸಕಿ ಡಾ.ಅಂಜಲಿ ಹೇಮಂತ ನಿಂಬಾಳ್ಕರ್, ಕೌಜಲಗಿ ಮಹಂತೇಶ್ ಶಿವಾನಂದ, ರೂಪಕಲಾ ಎಂ.ಶಶಿಧರ್, ರಾಘವೇಂದ್ರ ಬಸವರಾಜ್ ಹಿಟ್ನಾಳ್, ಡಿ.ಎಸ್.ಹೂಲಗೇರಿ, ವಿಧಾನ ಪರಿಷತ್ ಸದಸ್ಯರಾದ ಕೆ.ಅಬ್ದುಲ್ ಜಬ್ಬಾರ್, ಐವಾನ್ ಡಿಸೋಜಾ ಮತ್ತು ಕೆ.ಗೋವಿಂದರಾಜ್ ಅವರನ್ನು ಸಂಸದೀಯ ಕಾರ್ಯದರ್ಶಿಗಳನ್ನಾಗಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ನೇಮಕ ಮಾಡಿದ್ದರು.

ಈ ಸಂಬಂಧ ರಾಜ್ಯ ಸಂಸದೀಯ ವ್ಯವಹಾರಗಳ ಇಲಾಖೆ ಕಾರ್ಯದರ್ಶಿ 2019ರ ಜನವರಿ 7ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಈ ನೇಮಕಾತಿ ಸಂವಿಧಾನದ 164 (1) ‘ಎ’ ವಿಧಿಗೆ ವಿರುದ್ಧವಾಗಿದೆ ಎಂಬುದು ಅರ್ಜಿದಾರರ ಆಕ್ಷೇಪ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.