ಮುಂಬೈ: ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣಕ್ಕೆ ಸಂಬಂಧಿಸಿ ಉದ್ಯಮಿ ರಾಜ್ ಕುಂದ್ರಾ ಅವರ ಕಂಪನಿಯೊಂದರ ನಿರ್ದೇಶಕ ಅಭಿಜಿತ್ ಬೊಂಬ್ಲೆ ಎಂಬವರನ್ನು ಮುಂಬೈ ಅಪರಾಧ ದಳದ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಶ್ಲೀಲ ಚಿತ್ರ ನಿರ್ಮಾಣ ಮತ್ತು ಆ್ಯಪ್ ಮೂಲಕ ಪ್ರಸಾರ ಮಾಡುತ್ತಿದ್ದ ಆರೋಪದಲ್ಲಿ ರಾಜ್ ಕುಂದ್ರಾ ಅವರನ್ನು ಕಳೆದ ತಿಂಗಳು ಬಂಧಿಸಲಾಗಿತ್ತು.

ಓದಿ:ರಾಜ್ ಕುಂದ್ರಾ ಜೊತೆಗಿನ ಹಳೆಯ ಚಿತ್ರ ಪೋಸ್ಟ್ ಮಾಡಿದ ಶೆರ್ಲಿನ್ ಚೋಪ್ರಾ

ರೂಪದರ್ಶಿಯೊಬ್ಬರು ನೀಡಿದ್ದ ದೂರಿನ ಆಧಾರದಲ್ಲಿ ಮಾಲ್‌ವಾನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಕಿರುಚಿತ್ರಗಳು ಮತ್ತು ವೆಬ್ ಸೀರೀಸ್‌ಗಳಲ್ಲಿ ನಟಿಸಲು ಅವಕಾಶ ನೀಡುವುದಾಗಿ ಭರವಸೆ ನೀಡಿ ಬಳಿಕ ನಗ್ನ ದೃಶ್ಯಗಳಲ್ಲಿ ನಟಿಸುವಂತೆ ಒತ್ತಡ ಹೇರಲಾಗಿತ್ತು ಎಂದು ರೂಪದರ್ಶಿ ದೂರಿನಲ್ಲಿ ತಿಳಿಸಿದ್ದರು.

ಬೊಂಬ್ಲೆ ಕೂಡ ಪ್ರಕರಣದ ಆರೋಪಿಗಳಲ್ಲಿ ಒಬ್ಬರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಓದಿ:ಅಶ್ಲೀಲ ಚಿತ್ರ ನಿರ್ಮಾಣ: ಬಂಧನ ಪ್ರಶ್ನಿಸಿದ್ದ ರಾಜ್ ಕುಂದ್ರಾ ಅರ್ಜಿ ತಿರಸ್ಕಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.