ಪುಣೆ: ಪುಣೆಯ ಪೋಶೆ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರನ್ನು ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ.
ರಕ್ತದ ಮಾದರಿಗಳನ್ನು ವಿನಿಮಾಯ ಮಾಡಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪುಣೆ ಪೊಲೀಸರು ಹೇಳಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೂ 9 ಜನರನ್ನು ಬಂಧಿಸಲಾಗಿದೆ. ಈ ಹಿಂದೆ ಬಂಧಿಸಲಾಗಿದ್ದ 7 ಆರೋಪಿಗಳ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ 900 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದರು.
ಮೇ 19ರಂದು ಪುಣೆಯ ಕಲ್ಯಾಣಿ ನಗರದಲ್ಲಿ ನಡೆದಿದ್ದ ಕಾರು ಅಪಘಾತದಲ್ಲಿ ಇಬ್ಬರು ಐಟಿ ಉದ್ಯೋಗಿಗಳು ಮೃತಪಟ್ಟಿದ್ದರು. 17 ವರ್ಷದ ಬಾಲಕ ಮದ್ಯಪಾನ ಮಾಡಿ ಪೋಶೆ ಕಾರು ಚಲಾಯಿಸಿ ದ್ವಿಚಕ್ರ ವಾಹನಕ್ಕೆ ಗುದ್ದಿದ್ದ ಎಂಬ ಆರೋಪವಿದೆ.