ಶುಕ್ರವಾರ, 21 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಪೋಶೆ ಕಾರು ಅಪಘಾತ: ಮತ್ತಿಬ್ಬರ ಬಂಧನ

Published 4 ಜೂನ್ 2024, 15:39 IST
Last Updated 4 ಜೂನ್ 2024, 15:39 IST
ಅಕ್ಷರ ಗಾತ್ರ

ಪುಣೆ: ಪುಣೆಯ ಪೋಶೆ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ಫಕ್‌ ಮಕಾಂದಾರ್‌ ಮತ್ತು ಅಮರ್‌ ಗಾಯಕವಾಡ್‌ ಎಂಬುವವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರು ಚಲಾಯಿಸಿದ್ದ ಬಾಲಕನ ತಂದೆ ಹಾಗೂ ಸಾಸೂನ್‌ ಜನರಲ್‌ ಆಸ್ಪತ್ರೆಯ ಆರೋಪಿ ವೈದ್ಯರ ನಡುವೆ ಹಣಕಾಸಿನ ವಹಿವಾಟು ನಡೆಸಲು ಅಶ್ಫಕ್ ಹಾಗೂ ಅಮರ್ ಮಧ್ಯವರ್ತಿಗಳಾಗಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಮೇ 19ರಂದು ಪುಣೆಯ ಕಲ್ಯಾಣಿ ನಗರದಲ್ಲಿ ನಡೆದಿದ್ದ ಕಾರು ಅಪಘಾತದಲ್ಲಿ ಇಬ್ಬರು ಐಟಿ ಉದ್ಯೋಗಿಗಳು ಮೃತಪಟ್ಟಿದ್ದರು. 17 ವರ್ಷದ ಬಾಲಕ ಮದ್ಯಪಾನ ಮಾಡಿ ಪೋಶೆ ಕಾರು ಚಲಾಯಿಸಿ ದ್ವಿಚಕ್ರ ವಾಹನಕ್ಕೆ ಗುದ್ದಿದ್ದ ಎಂಬ ಆರೋಪವಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT