ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಜತೆ ಮೈತ್ರಿ ಬಗ್ಗೆ ಶೀಘ್ರ ನಿರ್ಧಾರ ಎಂದ ವೈ.ಎಸ್‌. ಶರ್ಮಿಳಾ

ವೈಎಸ್‌ಆರ್‌ ತೆಲಂಗಾಣ ಪಕ್ಷದ ಸಂಸ್ಥಾಪಕಿ ವೈ.ಎಸ್‌. ಶರ್ಮಿಳಾ ಹೇಳಿಕೆ
Published 25 ಸೆಪ್ಟೆಂಬರ್ 2023, 14:29 IST
Last Updated 25 ಸೆಪ್ಟೆಂಬರ್ 2023, 14:29 IST
ಅಕ್ಷರ ಗಾತ್ರ

ಹೈದರಾಬಾದ್‌: ‘ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಳ್ಳುವ ಕುರಿತು ಈ ತಿಂಗಳಾಂತ್ಯದೊಳಗೆ ನಿರ್ಧರಿಸಲಾಗುವುದು‘ ಎಂದು ವೈಎಸ್‌ಆರ್‌ ತೆಲಂಗಾಣ ಪಕ್ಷದ ಸಂಸ್ಥಾಪಕಿ ವೈ.ಎಸ್‌. ಶರ್ಮಿಳಾ ಅವರು ಸೋಮವಾರ ಹೇಳಿದ್ದಾರೆ.

ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್‌. ಜಗನ್‌ ಮೋಹನ್‌ ರೆಡ್ಡಿ ಅವರ ಸಹೋದರಿಯೂ ಆಗಿರುವ ಶರ್ಮಿಳಾ ಅವರು, ಮುಂಬರುವ ತೆಲಂಗಾಣ ವಿಧಾನಸಭಾ ಚುನಾವಣೆ ಅಂಗವಾಗಿ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ನಡೆಸಿದ ಸಭೆಯಲ್ಲಿ ಈ ಮಾಹಿತಿ ನೀಡಿದ್ದಾರೆ ಎಂದು ಹೇಳಿದೆ.

‘ಚುನಾವಣಾ ಅಧಿಸೂಚನೆ ಬಿಡುಗಡೆಯ ಸಮಯ ಸನ್ನಿಹಿತವಾಗಿದ್ದು, ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಳ್ಳುವುದರ ಕುರಿತು ಸೆಪ್ಟೆಂಬರ್‌ ತಿಂಗಳು ಮುಗಿಯುವ ವೇಳೆಗೆ ನಿರ್ಧಾರ ಮಾಡಲಾಗುವುದು. ಮೈತ್ರಿ ಫಲಿಸದಿದ್ದರೆ ಎಲ್ಲ 119 ಸ್ಥಾನಗಳಲ್ಲೂ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸುತ್ತಾರೆ. ಅಕ್ಟೋಬರ್‌ ಎರಡನೇ ವಾರದಲ್ಲಿ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೂ ಭೇಟಿ ನೀಡುವುದಾಗಿ ಶರ್ಮಿಳಾ ಅವರು ಹೇಳಿದ್ದಾರೆ. ಪಕ್ಷದ ಕಾರ್ಯಕರ್ತರ ಶ್ರಮವನ್ನು ಗುರುತಿಸಿ, ಅವರ ಹಿತಾಸಕ್ತಿಯನ್ನು ರಕ್ಷಿಸಲಾಗುವುದೆಂದು ಶರ್ಮಿಳಾ ಭರವಸೆ ನೀಡಿದ್ದಾರೆ’ ಎಂದೂ ಅದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT