ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೇಠಿಯಲ್ಲಿ ವಾದ್ರಾ ಪರ ಪೋಸ್ಟರ್‌

Published 24 ಏಪ್ರಿಲ್ 2024, 14:21 IST
Last Updated 24 ಏಪ್ರಿಲ್ 2024, 14:21 IST
ಅಕ್ಷರ ಗಾತ್ರ

ಅಮೇಠಿ: ಉತ್ತರ ಪ್ರದೇಶದ ಅಮೇಠಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಸ್ಪರ್ಧಿಸುವ ಬಗ್ಗೆ ಇನ್ನೂ ಅನಿಶ್ಚಿತತೆ ಮುಂದುವರಿದಿದ್ದು, ಈ ನಡುವೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್‌ ವಾದ್ರಾ ಅವರಿಗೆ ಬೆಂಬಲ ಸೂಚಿಸಿ ಕ್ಷೇತ್ರದ ವಿವಿಧೆಡೆ ಪೋಸ್ಟರ್‌ಗಳನ್ನು ಹಚ್ಚಲಾಗಿದೆ.

‘ಈ ಬಾರಿ ರಾಬರ್ಟ್‌ ವಾದ್ರಾ ಅವರು ಅಭ್ಯರ್ಥಿಯಾಗಬೇಕೆಂದು ಅಮೇಠಿಯ ಜನರು ಬಯಸಿದ್ದಾರೆ’ ಎಂಬ ಬರಹವಿರುವ ಪೋಸ್ಟರ್‌ಗಳನ್ನು ಕಾಂಗ್ರೆಸ್‌ ಕಚೇರಿ ಸೇರಿದಂತೆ ವಿವಿಧೆಡೆ ಹಚ್ಚಲಾಗಿದೆ. ಜಿಲ್ಲಾಡಳಿತ ಸಿಬ್ಬಂದಿ ಈ ಪೋಸ್ಟರ್‌ಗಳನ್ನು ತೆರವುಗೊಳಿಸಿದ್ದಾರೆ.

ಜನರಲ್ಲಿ ಗೊಂದಲ ಮೂಡಿಸುವ ಸಲುವಾಗಿ ವಿರೋಧಿಗಳು ಪೋಸ್ಟರ್‌ಗಳನ್ನು ಹಚ್ಚಿದ್ದಾರೆ ಎಂದು ಸ್ಥಳೀಯ ಕಾಂಗ್ರೆಸ್‌ ಮುಖಂಡರು ಆರೋಪಿಸಿದ್ದಾರೆ. ಈ ಕ್ಷೇತ್ರದಲ್ಲಿ ಸ್ಪರ್ಧಿಸುವ ಇಚ್ಛೆಯನ್ನು ವಾದ್ರಾ ಅವರು ಈಚೆಗೆ ವ್ಯಕ್ತಪಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT