ನವದೆಹಲಿ: ದೆಹಲಿ ವಿಮಾನ ನಿಲ್ದಾಣದಿಂದ ನಾಗಾಲ್ಯಾಂಡ್ನ ದಿಮಾಪುರಕ್ಕೆ ತೆರಳುತ್ತಿದ್ದ ಇಂಡಿಗೊ ವಿಮಾನದಲ್ಲಿ ಪ್ರಯಾಣಿಕರೊಬ್ಬರ ಪವರ್ ಬ್ಯಾಂಕ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಎಚ್ಚೆತ್ತ ಕ್ಯಾಬಿನ್ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಘಟನೆಯಲ್ಲಿ ಪ್ರಯಾಣಿಕರು ಗಾಯಗೊಂಡಿರುವ ಬಗ್ಗೆ ವರದಿಯಾಗಿಲ್ಲ. ವಿಮಾನದ ಸಿಬ್ಬಂದಿ ಮತ್ತು ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

‘ಅಕ್ಟೋಬರ್ 19ರಂದು (ಭಾನುವಾರ) ದೆಹಲಿಯಿಂದ ನಾಗಾಲ್ಯಾಂಡ್ನ ದಿಮಾಪುರಕ್ಕೆ ಹಾರಾಟ ನಡೆಸುತ್ತಿದ್ದ AI2107 ವಿಮಾನದ ಸೀಟ್-ಬ್ಯಾಕ್ನಲ್ಲಿ ಇಟ್ಟಿದ್ದ ಪ್ರಯಾಣಿಕರೊಬ್ಬರ ಪವರ್ ಬ್ಯಾಂಕ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತ ಕ್ಯಾಬಿನ್ ಸಿಬ್ಬಂದಿ ಕೆಲವೇ ಸೆಕೆಂಡುಗಳಲ್ಲಿ ಬೆಂಕಿಯನ್ನು ನಂದಿಸುವ ಮೂಲಕ ಪರಿಸ್ಥಿತಿಯನ್ನು ತ್ವರಿತವಾಗಿ ನಿರ್ವಹಿಸಿದ್ದಾರೆ’ ಎಂದು ಇಂಡಿಗೊ ವಿಮಾನಯಾನ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಕಿ ಕಾಣಿಸಿಕೊಂಡ ಪರಿಣಾಮ ವಿಮಾನ ಹಾರಾಟದಲ್ಲಿ ತುಸು ವ್ಯತ್ಯಯ ಉಂಟಾಯಿತು ಎಂದು ಫ್ಲೈಟ್ ಟ್ರ್ಯಾಕಿಂಗ್ ವೆಬ್ಸೈಟ್ ವರದಿ ಮಾಡಿದೆ.

ಈಚೆಗೆ ಹ್ಯಾಂಗ್ಝೌದಿಂದ ಸಿಯೋಲ್ಗೆ ಹೊರಟಿದ್ದ ಏರ್ ಚೀನಾ ವಿಮಾನದ ಓವರ್ಹೆಡ್ ಕಂಪಾರ್ಟ್ಮೆಂಟ್ನಲ್ಲಿ ಇರಿಸಲಾಗಿದ್ದ ಲಿಥಿಯಂ ಬ್ಯಾಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.