ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯ 46 ಲಕ್ಷ ಕುಟುಂಬಗಳಿಗೆ ನೀಡುತ್ತಿದ್ದ ವಿದ್ಯುತ್ ಸಬ್ಸಿಡಿ ದಿಢೀರ್ ಸ್ಥಗಿತ!

Last Updated 14 ಏಪ್ರಿಲ್ 2023, 13:53 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ 46 ಲಕ್ಷ ಕುಟುಂಬಗಳಿಗೆ ನೀಡಲಾಗುತ್ತಿದ್ದ ವಿದ್ಯುತ್ ಸಬ್ಸಿಡಿ ಇಂದಿಗೆ ಕೊನೆಗೊಳ್ಳಲಿದೆ. ನಾಳೆಯಿಂದ ವಿದ್ಯುತ್ ಬಿಲ್‌ಗೆ ಸಬ್ಸಿಡಿ ನೀಡುವುದಿಲ್ಲ ಎಂದು ದೆಹಲಿ ಇಂಧನ ಖಾತೆ ಸಚಿವೆ ಅತಿಶಿ ಮರ್ಲೆನಾ ಶುಕ್ರವಾರ ಘೋಷಿಸಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿರುವ ಅವರು, ವಿದ್ಯುತ್‌ ಸಬ್ಸಿಡಿ ದಿಢೀರ್‌ ಸ್ಥಗಿತವಾಗುತ್ತಿರುವುದು ಏಕೆ ಎಂಬ ಬಗ್ಗೆ ವಿವರಣೆಯನ್ನೂ ನೀಡಿದ್ದಾರೆ.

‘ವಿದ್ಯುತ್ ಸಬ್ಸಿಡಿಯನ್ನು ನಿಲ್ಲಿಸಲಾಗಿದೆ. ಎಎಪಿ ಸರ್ಕಾರವು ಮುಂಬರುವ ವರ್ಷಕ್ಕೆ ಸಬ್ಸಿಡಿಯನ್ನು ಮುಂದುವರೆಸುವ ನಿರ್ಧಾರವನ್ನು ತೆಗೆದುಕೊಂಡಿತ್ತು. ಆದರೆ, ಆ ನಿರ್ಧಾರಕ್ಕೆ ಸಂಬಂಧಿಸಿದ ಕಡತಕ್ಕೆ ದೆಹಲಿಯ ಲೆಫ್ಟಿನೆಂಟ್‌ ಗವರ್ನರ್‌ ಅವರ ಅನುಮೋದನೆ ಬೇಕಾಗಿದೆ. ಆದರೆ ಅದು ಈ ವರೆಗೆ ಸಿಕ್ಕಿಲ್ಲ. ಹೀಗಾಗಿ ಸಬ್ಸಿಡಿ ಬಿಡುಗಡೆ ಮಾಡಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.

ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್‌ ಗವರ್ನರ್‌ಗಳ ನಡುವಿನ ವಿವಾದ ಇದೇ ಮೊದಲಲ್ಲ. ಈ ಹಿಂದೆಯೂ ಹಲವು ಬಾರಿ, ಹಲವು ವಿಷಯಗಳಿಗೆ ಸಂಬಂಧಪಟ್ಟಂತೆ ವಾಗ್ವಾದಗಳು ನಡೆದಿವೆ.

ಇದನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT