ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ' ಘೋಷಿಸಿದ ಮೋದಿ

ಈ ಯೋಜನೆಯಿಂದ ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಕಡಿಮೆಯಾಗುವುದಲ್ಲದೆ, ಇಂಧನ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡುತ್ತದೆ–ಪ್ರಧಾನಿ ನರೇಂದ್ರ ಮೋದಿ
Published 23 ಜನವರಿ 2024, 3:46 IST
Last Updated 23 ಜನವರಿ 2024, 3:46 IST
ಅಕ್ಷರ ಗಾತ್ರ

ನವ ದೆಹಲಿ: ರಾಮಮಂದಿರ ಉದ್ಘಾಟನೆಯ ಬಳಿಕ ಪ್ರಧಾನಿ ಮೋದಿ ಹೊಸ ಯೋಜನೆಯೊಂದನ್ನು ಘೋಷಣೆ ಮಾಡಿದ್ದಾರೆ.

ಅಯೋಧ್ಯೆಯಿಂದ ಹಿಂದಿರುಗಿದ ನಂತರ ನಾನು ತೆಗೆದುಕೊಂಡ ಮೊದಲ ನಿರ್ಧಾರವೆಂದರೆ 'ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ'. ಈ ಯೋಜನೆಯಡಿ 1 ಕೋಟಿ ಮನೆಗಳಿಗೆ ಸೌರಫಲಕಗಳನ್ನು ಅಳವಡಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಪ್ರಪಂಚದ ಎಲ್ಲಾ ಭಕ್ತರು ಸೂರ್ಯವಂಶಸ್ಥ ಭಗವಾನ್ ಶ್ರೀರಾಮನ ಬೆಳಕಿನಿಂದ ಯಾವಾಗಲೂ ಶಕ್ತಿಯನ್ನು ಪಡೆಯುತ್ತಾರೆ. ಸೋಮವಾರ ಅಯೋಧ್ಯೆಯಲ್ಲಿ ಪ್ರಾಣ-ಪ್ರತಿಷ್ಠಾಪನೆಯ ಶುಭ ಸಂದರ್ಭದಲ್ಲಿ ನನ್ನ ಸಂಕಲ್ಪ ಮತ್ತಷ್ಟು ಬಲಗೊಂಡಿದೆ.

ರಾಮ ಮಂದಿರ ಉದ್ಘಾಟನೆ ಬಳಿಕ ನಮ್ಮ ಸರ್ಕಾರವು ಒಂದು ಕೋಟಿ ಮನೆಗಳ ಮೇಲ್ಛಾವಣಿಗೆ ಸೋಲಾರ್ ಅಳವಡಿಸುವ ಗುರಿಯೊಂದಿಗೆ ‘ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ' ಅನ್ನು ಪ್ರಾರಂಭಿಸಲಿದೆ. ಈ ಯೋಜನೆಯು ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಅನ್ನು ಕಡಿಮೆ ಮಾಡುವುದಲ್ಲದೆ, ಇಂಧನ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡುತ್ತದೆ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT