ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭೆಯ ಸದಸ್ಯರಾಗಿ ಪ್ರಫುಲ್ ಪಟೇಲ್ ಪ್ರಮಾಣ ವಚನ

Published 10 ಮೇ 2024, 14:06 IST
Last Updated 10 ಮೇ 2024, 14:06 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖಂಡ ಪ್ರಫುಲ್ ಪಟೇಲ್ ಅವರು ಶುಕ್ರವಾರ ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

‘ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್ ಅವರ ಉಪಸ್ಥಿತಿಯಲ್ಲಿ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದೆ’ ಎಂದು ಪಟೇಲ್ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಫೆಬ್ರವರಿ 21ರಂದು ಪಟೇಲ್ ಅವರು ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಪಟೇಲ್ ಅವರು ರಾಜ್ಯಸಭಾ ಸದಸ್ಯರಾಗಿ ಆರನೇ ಬಾರಿ ಆಯ್ಕೆಯಾಗಿದ್ದಾರೆ. ಅಲ್ಲದೆ 4 ಬಾರಿ ಲೋಕಸಭೆಗೂ ಆಯ್ಕೆಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT