ಉತ್ತರಾಖಂಡದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತ ತಲುಪಿದೆ. 12 ದಿನಗಳಿಂದ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯ ಪ್ರಗತಿಯನ್ನು ಪರಿಶೀಲಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಖಾತೆಯ ರಾಜ್ಯ ಸಚಿವ ವಿ.ಕೆ. ಸಿಂಗ್ ಮತ್ತು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕಾರ್ಮಿಕರನ್ನು ರಕ್ಷಿಸಲು ಆಗರ್ ಯಂತ್ರದ ಮೂಲಕ 45 ಮೀಟರ್ ಪೈಪ್ಲೈನ್ ಅಳವಡಿಕೆ ಅಂತಿಮ ಹಂತದಲ್ಲಿದೆ. ಕಾರ್ಮಿಕರನ್ನು ಆದಷ್ಟು ಬೇಗ ರಕ್ಷಿಸಲಾಗುವುದು ಎಂದು ಸಿಎಂ ಧಾಮಿ ಹೇಳಿದರು. ಪೈಪ್ಲೈನ್ ಅಳವಡಿಸಲು ಉಕ್ಕಿನ ರಂಧ್ರ ಕೊರೆಯುವಾಗ ಅಡ್ಡಬಂದಿದ್ದ ಉಕ್ಕಿನ ರಚನೆಯನ್ನು ತೆಗೆಯಲಾಗಿದೆ. ಸ್ಥಳಕ್ಕೆ ವೈದ್ಯಕೀಯ ಉಪಕರಣಗಳನ್ನು ತರಿಸಲಾಗಿದ್ದು, 40 ಆಂಬುಲೆನ್ಸ್ಗಳನ್ನೂ ತಂದಿಡಲಾಗಿದೆ. ಇದರೊಂದಿಗೆ, ಈ ದಿನದ ಪ್ರಮುಖ ವಿದ್ಯಮಾನಗಳು ಈ ವಿಡಿಯೊದಲ್ಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.