ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರರಾಷ್ಟ್ರೀಯ ಮಾಧ್ಯಮಗಳಲ್ಲೂ ಪ್ರಜ್ವಲ್ ರೇವಣ್ಣ ಸುದ್ದಿ

Published 2 ಮೇ 2024, 16:24 IST
Last Updated 2 ಮೇ 2024, 16:24 IST
ಅಕ್ಷರ ಗಾತ್ರ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪಗಳು ಅಂತರರಾಷ್ಟ್ರೀಯ ಸುದ್ದಿಮಾಧ್ಯಮಗಳಲ್ಲಿಯೂ ವಿಸ್ತೃತವಾಗಿ ವರದಿಯಾಗಿವೆ.

ಅಂತರರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ಓದುಗರನ್ನು, ವೀಕ್ಷಕರನ್ನು ಹೊಂದಿರುವ ಬಿಬಿಸಿ ಹಾಗೂ ಅಲ್‌ಜಜೀರಾ ತಮ್ಮ ವೆಬ್‌ಸೈಟ್‌ಗಳಲ್ಲಿ ಪ್ರಜ್ವಲ್ ಪ್ರಕರಣದ ಬಗ್ಗೆ ವಿವರವಾದ ವರದಿ ಪ್ರಕಟಿಸಿವೆ.

ಪ್ರಜ್ವಲ್ ಪ್ರಕರಣವು ಬಹಿರಂಗವಾದ ದಿನದಿಂದಲೂ ರಾಷ್ಟ್ರಮಟ್ಟದ ಸುದ್ದಿಮಾಧ್ಯಮಗಳಲ್ಲಿ ವರದಿಯಾಗುತ್ತಲೇ ಇದೆ. ಆದರೆ, ಅಂತರರಾಷ್ಟ್ರೀಯ ಸುದ್ದಿ ಮಾಧ್ಯಮಗಳು ಕೂಡ ಇದನ್ನು ವರದಿ ಮಾಡಿವೆ.

ಅಲ್‌ ಜಜೀರಾ ಸುದ್ದಿವಾಹಿನಿಯು, ಈ ಪ್ರಕರಣದಿಂದಾಗಿ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಮೇಲೆ ಯಾವ ಬಗೆಯ ಪರಿಣಾಮ ಉಂಟಾಗಬಹುದು ಎಂಬ ಬಗ್ಗೆ ರಾಜಕೀಯ ತಜ್ಞರ ಅಭಿಪ್ರಾಯವನ್ನು ಕೂಡ ಪ್ರಕಟಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT