ನವದೆಹಲಿ: ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿಯಲ್ಲಿ ಬೋಧನೆ ಮಾಡುವ ಕುರಿತು ಈವರೆಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಸ್ಪಷ್ಟಪಡಿಸಿದ್ದಾರೆ.
ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿ ಭಾಷೆಯಲ್ಲಿಯೇ ಬೋಧನೆ ಮಾಡಬೇಕು ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಸಮಿತಿ ಶಿಫಾರಸು ಮಾಡಿದ ನಂತರ ಸೃಷ್ಟಿಯಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯಿಸಿದ್ದಾರೆ.