ನವದೆಹಲಿ: ಮಾಜಿ ರಾಷ್ಟ್ರಪತಿಪ್ರಣವ್ ಮುಖರ್ಜಿ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಚೇತರಿಕೆ ಕಂಡು ಬಂದಿಲ್ಲ. ಶನಿವಾರವೂ ವೆಂಟಿಲೇಟರ್ ನೆರವಿನಿಂದೊಂದಿಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ.

ಇಲ್ಲಿನ ಸೇನಾ ಸಂಶೋಧನೆ ಮತ್ತು ರೆಫರಲ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತಜ್ಞವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ವಹಿಸಿದೆ ಎಂದು ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

ಮಿದುಳಿನ ಶಸ್ತ್ರಚಿಕಿತ್ಸೆಯ ನಂತರ ಅವರ ಆರೋಗ್ಯ ಸ್ಥಿತಿ ಗಂಭೀರವಾದ ಕಾರಣ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆಯನ್ನು ಮುಂದುವರಿಸಲಾಗಿದೆ. ಅವರಿಗೆ ಕೋವಿಡ್–19 ಇರುವುದು ಸಹ ದೃಢಪಟ್ಟಿದೆ.

ಈ ಹಿಂದಿನ ವರ್ಷ ಅವರು ಸ್ವಾತಂತ್ರ್ಯ ದಿನದಂದು ತ್ರಿವರ್ಣಧ್ವಜಕ್ಕೆ ಗೌರವ ವಂದನೆ ಸಲ್ಲಿಸುತ್ತಿದ್ದ ಚಿತ್ರಗಳನ್ನು ಅವರ ಕಚೇರಿ ಟ್ವಿಟರ್‌ನಲ್ಲಿ ಹಂಚಿಕೊಂಡಿದೆ. ಪುತ್ರಿ ಶರ್ಮಿಷ್ಠಾ ಮುಖರ್ಜಿ ಸಹ ಪ್ರಣವ್ ಮುಖರ್ಜಿ ಅವರು ಈ ಹಿಂದೆ ರಾಷ್ಡ್ರ ಧ್ವಜಾರೋಹಣ ನೆರವೇರಿಸುತ್ತಿದ್ದ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.