ಕೋಲ್ಕತ್ತ: ಚುನಾವಣೆ ತಂತ್ರಗಾರಿಕೆಯಿಂದ ದೂರ ಉಳಿಯುವುದಾಗಿ ಹೇಳಿದ್ದ ರಾಜಕೀಯ ತಜ್ಞ ಪ್ರಶಾಂತ್ ಕಿಶೋರ್ ತೃಣಮೂಲ ಕಾಂಗ್ರೆಸ್ನ (ಟಿಎಂಸಿ) ಸಂಘಟನಾ ಸಭೆಯಲ್ಲಿ ಭಾಗವಹಿಸಿ ಅಚ್ಚರಿ ಮೂಡಿಸಿದ್ದಾರೆ.

ಇದನ್ನೂ ಓದಿ:ಚುನಾವಣಾ ತಂತ್ರ ಪರಿಣತ ಪ್ರಶಾಂತ್ ಕಿಶೋರ್ ನೇಪಥ್ಯಕ್ಕೆ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಟಿಎಂಸಿಯ ಚುನಾವಣಾ ತಂತ್ರಜ್ಞರಾಗಿದ್ದ ಪ್ರಶಾಂತ್ ಕಿಶೋರ್ ಅವರು ಶನಿವಾರ ಕೋಲ್ಕತ್ತಾದಲ್ಲಿ ನಡೆದ ಪಕ್ಷದ ಸಾಂಸ್ಥಿಕ ಸಭೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ:ಬಂಗಾಳದಲ್ಲಿ ದೀದಿಯಷ್ಟೇ ಮೋದಿ ಜನಪ್ರಿಯ: ಪ್ರಶಾಂತ್ ಧ್ವನಿಮುದ್ರಿಕೆ ಬಹಿರಂಗ

ಸಭೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಮತ್ತು ಸಂಸದ ಅಭಿಷೇಕ್ ಬ್ಯಾನರ್ಜಿಯನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಯಿತು.

ಬಂಗಾಳ ಚುನಾವಣೆ ಫಲಿತಾಂಶದ ನಂತರ ಮಾತನಾಡಿದ್ದ ಕಿಶೋರ್ ಅವರು ಚುನಾವಣೆ ತಂತ್ರಗಾರಿಕೆ ಕೆಲಸ ತ್ಯಜಿಸುವುದಾಗಿ ಘೋಷಿಸಿದ್ದರು.

ಇದನ್ನೂ ಓದಿ:ಪ್ರಶಾಂತ್ ಕಿಶೋರ್ ಜೊತೆಗೂಡಿ ಜೆಡಿಎಸ್ ಚುನಾವಣಾ ತಂತ್ರ: ಎಚ್.ಡಿ. ಕುಮಾರಸ್ವಾಮಿ

ಪಕ್ಷದ ನಂಟು ಮೊದಲೇನಲ್ಲ

ಪ್ರಶಾಂತ್ ಕಿಶೋರ್ ರಾಜಕೀಯ ಪಕ್ಷವೊಂದರ ಜೊತೆ ಗುರುತಿಸಿಕೊಳ್ಳುತ್ತಿರುವುದು, ಆಂತರಿಕ ಸಭೆಯಲ್ಲಿ ಕಾಣಿಸಿಕೊಳ್ಳುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಅವರು ಬಿಹಾರದಲ್ಲಿ ನಿತೀಶ್ ಕುಮಾರ್ ಅವರ ಜೆಡಿಯು ಸೇರಿದ್ದರು. ಅವರನ್ನು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ಮಾಡಲಾಗಿತ್ತು. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸಿದ್ದ ಜೆಡಿಯು ನಿಲುವನ್ನು ಖಂಡಿಸಿ ಪಕ್ಷದ ವಿರುದ್ಧವೇ ತಿರುಗಿ ಬಿದ್ದ ಕಾರಣಕ್ಕೆ ಅವರನ್ನು 2020ರ ಜನವರಿಯಲ್ಲಿ ಪಕ್ಷದಿಂದ ಉಚ್ಚಾಟಿಸಲಾಗಿತ್ತು.

ಇದನ್ನೂ ಓದಿ:ಜೆಡಿಯು ನಿಲುವನ್ನು ವಿರೋಧಿಸಿದ್ದ ಪ್ರಶಾಂತ್ ಕಿಶೋರ್, ಪವನ್ ವರ್ಮಾರ ಉಚ್ಛಾಟನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.