ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಬಿಸಿಗೆ ತೆಲಂಗಾಣದ ವೀರಶೈವರು: ಆಯೋಗದ ಶಿಫಾರಸಿಗೆ ಕಾಯುತ್ತಿರುವ ಕೇಂದ್ರ- ಭೌಮಿಕ್‌

Published 25 ಜುಲೈ 2023, 15:41 IST
Last Updated 25 ಜುಲೈ 2023, 15:41 IST
ಅಕ್ಷರ ಗಾತ್ರ

ನವದೆಹಲಿ: ವೀರಶೈವ ಲಿಂಗಾಯತರನ್ನು ಕೇಂದ್ರದ ಇತರ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಗೆ ಸೇರಿಸುವಂತೆ ತೆಲಂಗಾಣ ಸರ್ಕಾರವು ಕೇಂದ್ರಕ್ಕೆ ಶಿಫಾರಸು ಮಾಡಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವರಾದ ಪ್ರತಿಮಾ ಭೌಮಿಕ್‌ ತಿಳಿಸಿದ್ದಾರೆ. 

ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಮಂಗಳವಾರ ಲಿಖಿತ ಉತ್ತರ ನೀಡಿರುವ ಅವರು, ‘ಈ ಪ್ರಸ್ತಾವವನ್ನು ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗಕ್ಕೆ ಕಳುಹಿಸಲಾಗಿದೆ. ಆಯೋಗದ ಶಿಫಾರಸಿಗಾಗಿ ಕಾಯುತ್ತಿದ್ದೇವೆ’ ಎಂದು ತಿಳಿಸಿದ್ದಾರೆ. 

ವೀರಶೈವ ಲಿಂಗಾಯತರು/ಲಿಂಗ ಬಲಿಜರನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸುವಂತೆ ಆಂಧ್ರ ಪ್ರದೇಶ ಹಾಗೂ ತಮಿಳುನಾಡು ಸರ್ಕಾರಗಳು ಶಿಫಾರಸು ಮಾಡಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT