ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವೀಣ್‌ ನೆಟ್ಟಾರು ಹತ್ಯೆ: ‍ಪೂರಕ ಚಾರ್ಜ್‌ಶೀಟ್‌ ಸಲ್ಲಿಸಿದ ಎನ್‌ಐಎ

Published 4 ಮೇ 2023, 16:28 IST
Last Updated 4 ಮೇ 2023, 16:28 IST
ಅಕ್ಷರ ಗಾತ್ರ

ನವದೆಹಲಿ: ‘ಕರ್ನಾಟಕದ ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಷೇಧಿತ ಪಾಪುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ಸಂಘಟನೆಯ ಇಬ್ಬರು ಸದಸ್ಯರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ಗುರುವಾರ ವಿಶೇಷ ನ್ಯಾಯಾಲಯಕ್ಕೆ ಪೂರಕ ದೋಷಾರೋಪ ಪಟ್ಟಿ ಸಲ್ಲಿಸಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಪಿಎಫ್‌ಐನ ಪ್ರಮುಖ ಶಸ್ತ್ರಾಸ್ತ್ರ ತರಬೇತುದಾರನಾಗಿದ್ದ ಎಂ.ಎಚ್‌.ತುಫೈಲ್ ಮತ್ತು ಮೊಹಮ್ಮದ್‌ ಜುಬೈರ್‌ ಎಂಬುವರ ವಿರುದ್ಧ ಐ‍ಪಿಸಿಯ ವಿವಿಧ ಕಲಂ ಹಾಗೂ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆಯ (ಯುಎಪಿಎ) ಅಡಿಯಲ್ಲಿ ಪೂರಕ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ’ ಎಂದು ಎನ್‌ಐಎ ವಕ್ತಾರರೊಬ್ಬರು ಹೇಳಿದ್ದಾರೆ.

‘ಪ್ರವೀಣ್‌ ಹತ್ಯೆಯ ಬಳಿಕ ತುಫೈಲ್‌ ತಲೆಮರೆಸಿಕೊಂಡಿದ್ದ. ಎನ್‌ಐಎ ಅಧಿಕಾರಿಗಳು ಇತ್ತೀಚೆಗೆ ಆತನನ್ನು ಬೆಂಗಳೂರಿನಲ್ಲಿ ಬಂಧಿಸಿದ್ದರು. ದೋಷಾರೋಪ ಪಟ್ಟಿಯಲ್ಲಿ ಒಟ್ಟು 21 ಮಂದಿ ಆರೋಪಿಗಳ ಹೆಸರನ್ನು ಉಲ್ಲೇಖಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT