ಲಖನೌ: ಉತ್ತರ ಪ್ರದೇಶದ ಪ್ರಯಾಗ್ರಾಜ್ನ ತ್ರಿವೇಣಿ ಸಂಗಮದಲ್ಲಿ ಮಾಘ ಮೇಳ ನಡೆಯುತ್ತಿದ್ದ ಸ್ಥಳದಲ್ಲಿ ಮಂಗಳವಾರ ಸಂಜೆ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಹಲವು ಟೆಂಟ್ಗಳು, ಅಂಗಡಿಗಳು ಸುಟ್ಟು ಭಸ್ಮವಾಗಿದೆ. ಯಾವುದೇ ಜೀವಹಾನಿ ವರದಿಯಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೊದಲು ನಾರಾಯಣ ಶುಕ್ಲಾ ಧಾಮ ಕ್ಯಾಂಪ್ ಸಮೀಪ ಬೆಂಕಿ ಕಾಣಿಸಿಕೊಂಡಿತು. ಇದು ಕ್ಷಿಪ್ರವಾಗಿ ಸಮೀಪದ ಟೆಂಟ್ಗಳಿಗೆ ವ್ಯಾಪಿಸಿತು. ಮಾಘ ಮೇಳದಲ್ಲಿ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಲು ಟೆಂಟ್ಗಳಲ್ಲಿ ಉಳಿದುಕೊಂಡಿದ್ದ ‘ಕಲ್ಪವಾಸಿಗಳು’ ತಕ್ಷಣವೇ ಹೊರಗೋಡಿ ಬಂದು ಜೀವ ಉಳಿಸಿಕೊಂಡರು.

ವಿದ್ಯುತ್ ಶಾರ್ಟ್ ಸರ್ಕೀಟ್ನಿಂದ ಅಗ್ನಿ ಅವಘಡ ಸಂಭವಿಸಿರುವುದು ಅಗ್ನಿಶಾಮಕ ದಳದ ಪ್ರಾಥಮಿಕ ಪರಿಶೀಲನೆಯಲ್ಲಿ ಕಂಡುಬಂದಿದೆ. ಮಾಘ ಮೇಳದಲ್ಲಿ ಭಾಗವಹಿಸಲು ದೇಶದ ಹಲವೆಡೆಯಿಂದ ಬಂದಿರುವ ಸಂತರು, ಭಕ್ತರು ಗಂಗಾ ನದಿ ತಟದಲ್ಲಿ ಟೆಂಟ್ಗಳನ್ನು ನಿರ್ಮಿಸಿಕೊಂಡಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಾಲ್ಕು ದಿನಗಳ ಹಿಂದಷ್ಟೇ ಮೇಳಕ್ಕೆ ಭೇಟಿ ನೀಡಿ, ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿ ಮರಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.