ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಕ್ಕಿಂ: ಎಸ್‌ಕೆಎಂ ಶಾಸಕಾಂಗ ಪಕ್ಷದ ನಾಯಕರಾಗಿ ಪ್ರೇಮ್ ಸಿಂಗ್ ತಮಾಂಗ್ ಆಯ್ಕೆ

Published 3 ಜೂನ್ 2024, 6:36 IST
Last Updated 3 ಜೂನ್ 2024, 6:36 IST
ಅಕ್ಷರ ಗಾತ್ರ

ಗ್ಯಾಂಗ್ಟಕ್: ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ(ಎಸ್‌ಕೆಎಂ) ಪಕ್ಷದ ಶಾಸಕಾಂಗ ಪಕ್ಷದ ನಾಯಕರಾಗಿ ಪ್ರೇಮ್ ಸಿಂಗ್ ತಮಾಂಗ್‌ ಆಯ್ಕೆಯಾಗಿದ್ದು, ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದು ದೃಢಪಟ್ಟಿದೆ.

ಭಾನುವಾರ ರಾತ್ರಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಹೊಸದಾಗಿ ಆಯ್ಕೆಯಾಗಿರುವ ಪಕ್ಷದ ಎಲ್ಲ 31 ಶಾಸಕರು ಉಪಸ್ಥಿತರಿದ್ದರು.

ಸಭೆಯಲ್ಲಿ ಎಸ್‌ಕೆಎಂನ ಪ್ರಧಾನ ಕಾರ್ಯದರ್ಶಿ ಅರುಣ್ ಉಪ್ರೇಟಿ ಅವರು ತಮಾಂಗ್ ಹೆಸರನ್ನು ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಪ್ರಸ್ತಾಪಿಸಿದರು. ಬಳಿಕ, ಅವಿರೋಧವಾಗಿ ತಮಾಂಗ್ ಆಯ್ಕೆ ನಡೆಯಿತು.

ಆಯ್ಕೆ ಬಳಿಕ ತಮಾಂಗ್‌ಗೆ ಶುಭಾಶಯ ತಿಳಿಸಿದ ಶಾಸಕರು, ಅವರ ನಾಯಕತ್ವದಲ್ಲಿ ಸಮರ್ಪಣಾ ಭಾವದಿಂದ ಕೆಲಸ ಮಾಡುವ ಭರವಸೆ ನೀಡಿದರು.

ಏಪ್ರಿಲ್ 18ರಂದು ನಡೆದ ಸಿಕ್ಕಿಂ ವಿಧಾನಸಭಾ ಚುನಾವಣೆಯ ಫಲಿತಾಂಶ ಭಾನುವಾರ ಹೊರಬಿದ್ದಿತು. ರಾಜ್ಯದ 32 ಕ್ಷೇತ್ರಗಳ ಪೈಕಿ ಎಸ್‌ಕೆಎಂ 31 ರಲ್ಲಿ ಗೆಲುವು ದಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT