ಚೆನ್ನೈ: ತಮಿಳುನಾಡು ವಿಧಾನಸಭೆಯಲ್ಲಿ ಬುಧವಾರ ನಡೆದ ವಿಶ್ವಾಸಮತ ಸಾಬೀತಿನ ಸಂದರ್ಭದಲ್ಲಿ ಆಡಳಿತಾರೂಢ ಟಿವಿಕೆ ಸರ್ಕಾರದ ವಿರುದ್ಧ ದೇಶೀಯ ಮುರ್ಪೊಕ್ಕು ದ್ರಾವಿಡರ್ ಕಳಗಂ (ಡಿಎಂಡಿಕೆ) ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರೇಮಲತಾ ವಿಜಯಕಾಂತ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಶಾಸಕರ ‘ಕುದುರೆ ವ್ಯಾಪಾರ’ ನಡೆದಿದೆ ಎಂಬ ಆರೋಪಗಳು ರಾಜ್ಯಕ್ಕೆ ಅತಿದೊಡ್ಡ ಅವಮಾನ ಎಂದಿದ್ದಾರೆ.

‘ಈ ಐತಿಹಾಸಿಕ ಸದನದಲ್ಲಿ ಶಾಸಕರ ಖರೀದಿ ಪ್ರಕ್ರಿಯೆ ಅಥವಾ ಕುದುರೆ ವ್ಯಾಪಾರ ನಡೆದಿದ್ದರೆ, ಅದಕ್ಕಿಂತ ದೊಡ್ಡ ಅವಮಾನ ಬೇರೊಂದಿಲ್ಲ. ಈ ಕುರಿತು ಮುಖ್ಯಮಂತ್ರಿಗಳು ಉತ್ತರಿಸುತ್ತಾರೆ ಎಂಬ ನಂಬಿಕೆ ನನಗಿದೆ’ ಎಂದು ಅವರು ಸದನದ ಕಲಾಪದ ವೇಳೆ ಆಗ್ರಹಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಟಿವಿಕೆ ಸರ್ಕಾರದ ಒಳ್ಳೆಯ ಕೆಲಸಗಳಿಗೆ ನಾವು ಬೆಂಬಲ ನೀಡುತ್ತೇವೆ. ಆದರೆ ಅವರ ತಪ್ಪುಗಳನ್ನು ಎತ್ತಿ ತೋರಿಸುವುದು ನಮ್ಮ ಕರ್ತವ್ಯ. ಶಾಸಕರ ಕುದುರೆ ವ್ಯಾಪಾರದ ಬಗ್ಗೆ ಕೇಳಿ ಬರುತ್ತಿರುವ ವರದಿಗಳು ಆತಂಕಕಾರಿಯಾಗಿವೆ’ ಎಂದು ತಿಳಿಸಿದರು.

ಇನ್ನು, ರಿಕ್ಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ವಿಶೇಷ ಅಧಿಕಾರಿಯನ್ನಾಗಿ ನೇಮಿಸಿರುವುದನ್ನು ಪ್ರೇಮಲತಾ ಖಂಡಿಸಿದರು. ‘ಅವರು ನಿಮ್ಮ ಪಾಲಿನ ರಾಜಗುರು ಆಗಿದ್ದರೆ ಅವರನ್ನು ವೈಯಕ್ತಿಕವಾಗಿ ಇಟ್ಟುಕೊಳ್ಳಿ. ಆದರೆ ಅವರನ್ನು ಸರ್ಕಾರದ ಉನ್ನತ ಹುದ್ದೆಗೆ ತರುವ ಮೂಲಕ ಯುವಜನತೆಗೆ ಯಾವ ರೀತಿಯ ಸಂದೇಶ ನೀಡುತ್ತಿದ್ದೀರಿ’ ಎಂದು ಪ್ರಶ್ನಿಸಿದರು.

‘ಇಲ್ಲಿ ಯಾರೂ ಮುಖವಾಡ ಹಾಕಿಕೊಳ್ಳುವ ಅಗತ್ಯವಿಲ್ಲ ಮತ್ತು ಪಾರದರ್ಶಕ ಆಡಳಿತ ನೀಡುವುದಾಗಿ ಮುಖ್ಯಮಂತ್ರಿ ಹೇಳಿದರು. ಹಾಗಿದ್ದಲ್ಲಿ, ಆ ದಿನ ಮುಖ ಮುಚ್ಚಿಕೊಂಡು ವಾಹನದಲ್ಲಿ ಮುಖ್ಯಮಂತ್ರಿ ನಿವಾಸಕ್ಕೆ ಭೇಟಿ ಮಾಡಲು ಹೋದವರು ಯಾರು ಎಂಬ ಬಗ್ಗೆ ಜನರಿಗೆ ಸ್ಪಷ್ಟನೆ ನೀಡಲಿ ಎಂದು ವಿನಂತಿಸುತ್ತೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.