ನವದೆಹಲಿ: ಇಲ್ಲಿನ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ, ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ಹಾಗೂ ತಿರುಪತಿಯ ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಸಹಯೋಗದಲ್ಲಿ ‘ಉತ್ಕರ್ಷ ಮಹೋತ್ಸವ 2024’ ಜರುಗಿತು.
ಸಂಸ್ಕೃತ ಕ್ಷೇತ್ರದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ ಹಿರಿಯ ಸಂಶೋಧಕ ಡಾ. ಸೂರ್ಯನಾರಾಯಣ ನಾಗೇಂದ್ರ ಭಟ್ಟ ಹಿತ್ಲಳ್ಳಿ ಸೇರಿದಂತೆ ಐವರಿಗೆ ಕೇಂದ್ರ ಜವಳಿ ಸಚಿವ ಗಿರಿರಾಜ್ ಸಿಂಗ್ ಅವರು ಪ್ರಾಚ್ಯವಿದ್ಯಾ ಭೂಷಣ ಪ್ರಶಸ್ತಿ ನೀಡಿ ಗೌರವಿಸಿದರು.
ಸಂಸ್ಕೃತ ಕ್ಷೇತ್ರದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ ವಿದ್ವಾಂಸರಿಗೆ ಪ್ರಾಚ್ಯವಿದ್ಯಾ ಭೂಷಣ ಪ್ರಶಸ್ತಿ ಮತ್ತು ₹1 ಲಕ್ಷ ನಗದು ಬಹುಮಾನ ನೀಡಲು ಮೂರು ಸಂಸ್ಕೃತ ವಿಶ್ವವಿದ್ಯಾಲಯಗಳು ನಿರ್ಧರಿಸಿವೆ.
ಡಾ. ಸೂರ್ಯನಾರಾಯಣ ನಾಗೇಂದ್ರ ಭಟ್ಟ ಹಿತ್ಲಳ್ಳಿ ಅವರಿಗೆ ಪ್ರಾಚ್ಯವಿದ್ಯಾ ಭೂಷಣ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಕೇಂದ್ರ ಜವಳಿ ಸಚಿವ ಗಿರಿರಾಜ್ ಸಿಂಗ್, ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶ್ರೀನಿವಾಸ ವರಖೇಡಿ, ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಮುರಳಿಮನೋಹರ ಪಾಠಕ್, ತಿರುಪತಿ ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಜಿ. ಎಸ್. ಆರ್. ಕೃಷ್ಣಮೂರ್ತಿ, ಭಾರತೀಯ ಭಾಷಾ ಸಮಿತಿಯ ಅಧ್ಯಕ್ಷ ಚ. ಮೂ. ಕೃಷ್ಣಶಾಸ್ತ್ರಿ ಇದ್ದಾರೆ.