ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊದಲ ಬಾರಿಗೆ ಮೆಟ್ರೊದಲ್ಲಿ ಪ್ರಯಾಣಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

Published 7 ಫೆಬ್ರುವರಿ 2024, 10:11 IST
Last Updated 7 ಫೆಬ್ರುವರಿ 2024, 10:11 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು (ಬುಧವಾರ) ದೆಹಲಿ ಮೆಟ್ರೊದಲ್ಲಿ ಪ್ರಯಾಣಿಸಿದ್ದಾರೆ.

ಮುರ್ಮು ಅವರು ರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಮುರ್ಮು ಅವರು ಹಳದಿ ಸೀರೆಯುಟ್ಟು ಪ್ರಯಾಣ ಬೆಳಸಿದರು. ಈ ವೇಳೆ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದವನ್ನೂ ನಡೆಸಿದರು.

ದೆಹಲಿ ಮೆಟ್ರೊದ ನೇರಳೆ ಮಾರ್ಗದಲ್ಲಿ ಮುರ್ಮು ಪ್ರಯಾಣಿಸಿದ್ದಾರೆ. ಕಾಶ್ಮೀರ್ ಗೇಟ್– ರಾಜಾ ನಹರ್ ಸಿಂಗ್ (ಬಲ್ಲಭಗಢ) ನಡುವೆ ಈ ನೇರಳೆ ಮಾರ್ಗ ಚಲಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT