ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ವರ್ಷದ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ

Published 1 ಜನವರಿ 2024, 2:32 IST
Last Updated 1 ಜನವರಿ 2024, 2:32 IST
ಅಕ್ಷರ ಗಾತ್ರ

ನವದೆಹಲಿ: ದೇಶದ ಜನರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ.

‘ಸಮೃದ್ಧ ರಾಷ್ಟ್ರ ನಿರ್ಮಾಣದ ಸಂಕಲ್ಪ ಕೈಗೊಳ್ಳಿ. ಹೊಸ ಗುರಿ ಮತ್ತು ಉದ್ದೇಶಗಳೊಂದಿಗೆ ಮುನ್ನಡೆಯಲು ಹೊಸವರ್ಷ ಬರುತ್ತಿದೆ’ ಎಂದು ದ್ರೌಪದಿ ಮುರ್ಮು ತಿಳಿಸಿದ್ದಾರೆ.

‘ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಈ ವರ್ಷ (2024) ಎಲ್ಲರಿಗೂ ಸಮೃದ್ಧಿ, ಶಾಂತಿ ಮತ್ತು ಉತ್ತಮ ಆರೋಗ್ಯ ದೊರೆಯಲಿ’ ಎಂದು ಪ್ರಧಾನಿ ನರೇಂದ್ರ ಮೋದಿ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಹರ್ಷೋದ್ಗಾರ, ಪರಸ್ಪರ ಶುಭಾಶಯ ವಿನಿಮಯ, ಪಟಾಕಿಗಳ ಚಿತ್ತಾರಗಳೊಂದಿಗೆ ಜನರು ಹೊಸ ವರ್ಷವನ್ನು ಬರಮಾಡಿಕೊಂಡಿದ್ದಾರೆ.

ರಸ್ತೆಗಳು, ಹೋಟೆಲ್, ಪಬ್, ಬಾರ್ ಹಾಗೂ ರೆಸ್ಟೋರೆಂಟ್‌ಗಳಲ್ಲಿ ನೆಚ್ಚಿನ ಹಾಡುಗಳಿಗೆ ಹೆಜ್ಜೆ ಹಾಕಿ ಕುಣಿದು ಕುಪ್ಪಳಿಸಿದ ಯುವಕ–ಯುವತಿಯರು. ಕೇಕೆ, ಶಿಳ್ಳೆ ಹಾಕುವ ಮೂಲಕ ಮೊಳಗಿದ ‘ಹ್ಯಾಪಿ ನ್ಯೂ ಇಯರ್‌’ ಘೋಷಣೆ.

ಇದು ಹೊಸ ವರ್ಷಾಚರಣೆಯ ವೇಳೆ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಭಾನುವಾರ ಕಂಡುಬಂದ ದೃಶ್ಯಾವಳಿಗಳು. 2023ಕ್ಕೆ ವಿದಾಯ ಹೇಳಿ, 2024 ಅನ್ನು ನವೋಲ್ಲಾಸದಿಂದ ಜನರು ಮಧ್ಯರಾತ್ರಿ ಸ್ವಾಗತಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಭಾನುವಾರ ಮಧ್ಯರಾತ್ರಿ 1 ಗಂಟೆ ವರೆಗೆ ಹೊಸ ವರ್ಷಾಚರಣೆಗೆ ಪೊಲೀಸ್‌ ಇಲಾಖೆ ಅವಕಾಶ ಕಲ್ಪಿಸಿತ್ತು. ಹಲವೆಡೆ ಅವಧಿಗೂ ಮೀರಿ ಆಚರಣೆ ನಡೆಯಿತು. ರಸ್ತೆಗಳು ರಂಗು ಪಡೆದುಕೊಂಡಿದ್ದವು. ಒಮ್ಮೆಲೇ ಪ್ರವಾಹದಂತೆ ಜನರು ಬಂದರು. 10 ಗಂಟೆಯ ನಂತರ ಎಂ.ಜಿ ರಸ್ತೆಯತ್ತ ಬರುವ ಜನರ ಸಂಖ್ಯೆ ಹೆಚ್ಚಾಗಿತ್ತು. ಸ್ಥಳದಲ್ಲಿದ್ದ ಪೊಲೀಸರು ದಟ್ಟಣೆ ನಿಯಂತ್ರಣಕ್ಕೆ ಹರಸಾಹಸಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT