ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಾಖಂಡದ ಏಕರೂಪ ನಾಗರಿಕ ಸಂಹಿತೆ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ

Published 14 ಮಾರ್ಚ್ 2024, 2:55 IST
Last Updated 14 ಮಾರ್ಚ್ 2024, 2:55 IST
ಅಕ್ಷರ ಗಾತ್ರ

ಡೆಹ್ರಾಡೂನ್: ಉತ್ತರಾಖಂಡ ರಾಜ್ಯದ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ. ರಾಜ್ಯ ಸರ್ಕಾರವು ಪ್ರಕಟಣೆ ಮೂಲಕ ಈ ಮಾಹಿತಿ ನೀಡಿದೆ.

ರಾಜ್ಯ ಸರ್ಕಾರ ಅಂಗೀಕರಿಸಿದ್ದ ಮಸೂದೆಯನ್ನು ರಾಜ್ಯಪಾಲ ಗುರ್ಮೀತ್ ಸಿಂಗ್ ಅವರು ಫೆಬ್ರುವರಿ 29ರಂದು ರಾಷ್ಟ್ರಪತಿ ಅಂಕಿತಕ್ಕೆ ಕಳುಹಿಸಿಕೊಟ್ಟಿದ್ದರು. ಇದೀಗ, ಸ್ವಾತಂತ್ರ್ಯಾನಂತರ ಯುಸಿಸಿ ಕಾಯ್ದೆ ಜಾರಿಗೆ ತಂದ ಮೊದಲ ರಾಜ್ಯ ಉತ್ತರಾಖಂಡವಾಗಿದೆ.

ಸಿಎಂ ಪುಷ್ಕರ್ ಸಿಂಗ್ ಧಾಮಿ ನೇತೃತ್ವದ ಉತ್ತರಾಖಂಡ ಸರ್ಕಾರವು ಫೆಬ್ರುವರಿ 6ರಂದು ವಿಶೇಷ ಅಧಿವೇಶನದ ಸಂದರ್ಭ ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿತ್ತು. ಮಸೂದೆ ಅಂಗೀಕಾರವು ಉತ್ತರಾಖಂಡ ರಾಜ್ಯದಲ್ಲಿ ಇತಿಹಾಸವಾಗಲಿದೆ ಎಂದು ಧಾಮಿ ಹೇಳಿದ್ದರು. ಬಹುಮತದೊಂದಿಗೆ ಮಸೂದೆ ಅಂಗೀಕಾರವಾಗಿತ್ತು.

‘2022ರ ವಿಧಾನಸಭೆ ಚುನಾವಣೆ ವೇಳೆ ಜನರಿಗೆ ನೀಡಿದ್ದ ಭರವಸೆಯನ್ನು ಈ ಕಾಯ್ದೆ ಪೂರ್ಣಗೊಳಿಸಲಿದೆ. ನರೇಂದ್ರ ಮೋದಿ ನಾಯಕತ್ವದಲ್ಲಿ ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣಕ್ಕೆ ಇದು ಉತ್ತರಾಖಂಡದ ಚಿಕ್ಕ ಕೊಡುಗೆ ’ ಎಂದು ಸಿಎಂ ಹೇಳಿದ್ದರು.

ಈ ಮೂಲಕ ಎಲ್ಲ ಧರ್ಮಗಳ ಮಹಿಳೆಯರು, ಪುರುಷರಿಗೆ ಏಕರೂಪದ ಕಾನೂನು ಅನ್ವಯವಾಗಲಿದೆ. ತಾರತಮ್ಯರಹಿತ, ಏಕತೆಯ ಸಮಾಜ ನಿರ್ಮಾಣಕ್ಕೆ ಅನುಕೂಲವಾಗಲಿದೆ ಎಂದೂ ಅವರು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT