ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಫ್ರಿಕಾದ ದಕ್ಷಿಣ ಭಾಗದ ಅಂಗೋಲಾ ಹಾಗೂ ಬೋಟ್ಸ್ವಾನಾ ದೇಶಗಳಿಗೆ 6 ದಿನಗಳ ಪ್ರವಾಸಕ್ಕೆ ಶನಿವಾರ ತೆರಳಿದರು. ಈ ದೇಶಗಳಿಗೆ ಭಾರತದ ರಾಷ್ಟ್ರಪತಿಯೊಬ್ಬರು ಭೇಟಿ ನೀಡುತ್ತಿರುವುದು ಇದೇ ಮೊದಲು.

ಆ ದೇಶಗಳೊಂದಿಗೆ ಸಹಯೋಗ ಹಾಗೂ ಪಾಲುದಾರಿಕೆಯನ್ನು ವಿಸ್ತರಿಸುವ ಭಾರತದ ಪ್ರಯತ್ನದ ಭಾಗವಾಗಿ ಈ ಪ್ರವಾಸ ಕೈಗೊಂಡಿದ್ದಾರೆ.

ಮೊದಲು ಅಂಗೋಲಾ ರಾಜಧಾನಿ ಲೌಂಡಾಕ್ಕೆ ಮುರ್ಮು ಬಂದಿಳಿಯಲಿದ್ದಾರೆ. ಇಲ್ಲಿ ನ.8 ರಿಂದ 11ರವರೆಗೆ ಪ್ರವಾಸದಲ್ಲಿರಲಿರುವ ಅವರು ದೇಶದ 50ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗಿಯಾಗಲಿದ್ದಾರೆ.

ಅಂಗೋಲಾ ಅಧ್ಯಕ್ಷ ಜಾವೊ ಮ್ಯಾನುಯೆಲ್ ಗೊಂಕ್ಲಾವೆಸ್ ಲಿಯೊರೆಂಕೊ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಉನ್ನತ ಮಟ್ಟದ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಆ ದೇಶದ ಸಂಸತ್ತನ್ನು ಉದ್ದೇಶಿಸಿ ಮುರ್ಮು ಮಾತನಾಡಲಿದ್ದು, ಅಲ್ಲಿರುವ ಭಾರತೀಯರೊಂದಿಗೆ ಸಂವಾದ ನಡೆಸಲಿದ್ದಾರೆ.

ಬಳಿಕ ನ.11ರಿಂದ 13ರವರೆಗೆ ಬೋಟ್ಸ್ವಾನಾ ರಾಜಧಾನಿ ಗಾಬೊರೋನ್ ಪ್ರವಾಸದಲ್ಲಿ ಇರಲಿದ್ದಾರೆ. ಅಧ್ಯಕ್ಷ ದುಮಾ ಗಿಡೋನ್ ಬೊಕೊ ಅವರನ್ನು ಮುರ್ಮು ಭೇಟಿಯಾಗಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.