ಸಂಪೂರ್ಣ ಭಾಷಣವನ್ನು ಆಲ್ ಇಂಡಿಯಾ ರೇಡಿಯೋ ಸೇರಿದಂತೆ ಎಲ್ಲಾ ದೂರದರ್ಶನ ಚಾನೆಲ್‌ಗಳಲ್ಲಿ ಸಂಜೆ 7ರಿಂದ ಹಿಂದಿ ಭಾಷೆಯಲ್ಲಿ ಪ್ರಸಾರ ಮಾಡಲಾಗುತ್ತದೆ. ಬಳಿಕ ಇಂಗ್ಲಿಷ್ ಆವೃತ್ತಿಯಲ್ಲಿ ಪ್ರಸಾರ ಮಾಡಲಾಗುವುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಪ್ರಸಾರವಾಗುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣವನ್ನು ದೂರದರ್ಶನದ ಪ್ರಾದೇಶಿಕ ಚಾನೆಲ್‌ಗಳು ಪ್ರಾದೇಶಿಕ ಭಾಷೆಗಳಲ್ಲಿ ಪ್ರಸಾರ ಮಾಡಲಿವೆ.
ಆಕಾಶವಾಣಿಯು ಪ್ರಾದೇಶಿಕ ಭಾಷಾ ಆವೃತ್ತಿಗಳನ್ನು ರಾತ್ರಿ 9.30ಕ್ಕೆ ತನ್ನ ಪ್ರಾದೇಶಿಕ ನೆಟ್‌ವರ್ಕ್‌ಗಳಲ್ಲಿ ಪ್ರಸಾರ ಮಾಡಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.