ಗುರುವಾರ, 3 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

'ಮಹಾ' ಕ್ಷಿಪ್ರ ಬೆಳವಣಿಗೆ: ಮುಂಜಾನೆ 5.47ಕ್ಕೆ ರಾಷ್ಟ್ರಪತಿ ಆಳ್ವಿಕೆ ವಾಪಸ್

Published : 23 ನವೆಂಬರ್ 2019, 6:20 IST
ಫಾಲೋ ಮಾಡಿ
Comments

ನವದೆಹಲಿ: ಮಹಾರಾಷ್ಟ್ರದಲ್ಲಿ ಹೇರಲಾಗಿದ್ದ ರಾಷ್ಟ್ರಪತಿ ಆಳ್ವಿಕೆಯನ್ನು ಬಿಜೆಪಿಯ ದೇವೇಂದ್ರ ಫಡಣವೀಸ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಕೆಲಗಂಟೆಗೂ ಮುನ್ನ ಅಂದರೆ ಮುಂಜಾನೆ 5.47ರ ಸುಮಾರಿಗೆ ಹಿಂತೆಗೆದುಕೊಳ್ಳಲಾಗಿದೆ.

ಎಲ್ಲ ಪಕ್ಷಗಳಿಂದಲೂಸ್ಥಿರ ಸರ್ಕಾರ ರಚನೆ ಅಸಾಧ್ಯ ಎಂದು ರಾಜ್ಯಪಾಲ ಭಗತ್‌ ಸಿಂಗ್ ಕೋಶಿಯಾರಿ ವರದಿ ಆಧರಿಸಿ ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟದ ಶಿಫಾರಸು ಮೇರೆಗೆ ರಾಜ್ಯದಲ್ಲಿ 356ನೇ ವಿಧಿ ಅಡಿಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ನವೆಂಬರ್ 12ರಂದು ರಾಷ್ಟ್ರ ಪತಿ ಆಡಳಿತದ ಘೋಷಣೆ ಹೊರಡಿಸಿದ್ದರು.

ಇಂದು ಮುಂಜಾನೆ ಕೇಂದ್ರದ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಹೊರಡಿಸಿದ ಅಧಿಸೂಚನೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಮಹಾರಾಷ್ಟ್ರದಲ್ಲಿ ಹೇರಲಾಗಿದ್ದ ರಾಷ್ಟ್ರಪತಿ ಆಳ್ವಿಕೆಯನ್ನು ನವೆಂಬರ್ 23ರಿಂದ ಅನ್ವಯವಾಗುವಂತೆ ಹಿಂಪಡೆದಿದ್ದಾರೆ ಎಂದು ತಿಳಿಸಿದ್ದರು.

ಶಿವಸೇನಾ, ಕಾಂಗ್ರೆಸ್ ಮತ್ತು ಎನ್‌ಸಿಪಿ ನಡುವಿನ ಸಭೆ ಬಳಿಕ ಶಿವಸೇನಾದ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಮುಖ್ಯಮಂತ್ರಿಯಾಗುತ್ತಾರೆ ಎನ್ನುವ ಮಾತುಗಳು ಕೇಳಿಬಂದಿದ್ದವು. ಆದರೆ ಶನಿವಾರ ತಡರಾತ್ರಿಯೇ ಬಿಜೆಪಿ ಮತ್ತು ಎನ್‌ಸಿಪಿಯ ಅಜಿತ್ ಪವಾರ್ನಡುವೆ ಸರ್ಕಾರ ರಚನೆಯ ಒಪ್ಪಂದವಾಗಿದೆ.

ತಡರಾತ್ರಿ ನಡೆದ ನಾಟಕೀಯ ಬೆಳವಣಿಗೆಯಲ್ಲಿ ಬಿಜೆಪಿಯು ನ್ಯಾಷನಲಿಸ್ಟ್ ಕಾಂಗ್ರೆಸ್‌ ಪಕ್ಷದೊಂದಿಗೆ ಸೇರಿ ಶನಿವಾರ ಮುಂಜಾನೆ ಸರ್ಕಾರ ರಚಿಸಿದ್ದು, ಮುಖ್ಯಮಂತ್ರಿಯಾಗಿ ದೇವೇಂದ್ರ ಫಡಣವೀಸ್ ಮತ್ತು ಉಪಮುಖ್ಯಮಂತ್ರಿಯಾಗಿ ಎನ್‌ಸಿಪಿಯ ಅಜಿತ್ ಪವಾರ್ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇನ್ನಷ್ಟು...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT