ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಮೃತಿಗೆ ಅಲ್ಪಸಂಖ್ಯಾತ ವ್ಯವಹಾರ, ಸಿಂಧಿಯಾಗೆ ಉಕ್ಕು ಖಾತೆಯ ಹೆಚ್ಚುವರಿ ಹೊಣೆ

Last Updated 6 ಜುಲೈ 2022, 16:31 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸಚಿವರಾದ ಮುಖ್ತಾರ್ ಅಬ್ಬಾಸ್ ನಖ್ವಿ ಮತ್ತು ರಾಮಚಂದ್ರ ಪ್ರಸಾದ್ ಸಿಂಗ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಗೀಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.

ತಮ್ಮ ರಾಜ್ಯಸಭೆಯ ಸದಸ್ಯತ್ವದ ಅವಧಿ ಮುಗಿಯುವುದಕ್ಕೂ ಒಂದು ದಿನ ಮೊದಲು ಬುಧವಾರ, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾಗಿದ್ದ ಮುಖ್ತಾರ್ ಅಬ್ಬಾಸ್ ನಖ್ವಿ ಮತ್ತು ಉಕ್ಕು ಸಚಿವ ಸಿಂಗ್, ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದರು.

ರಾಷ್ಟ್ರಪತಿ ಭವನದ ಪ್ರಕಟಣೆ ಪ್ರಕಾರ, ಪ್ರಧಾನಿ ಮೋದಿಯವರ ಸೂಚನೆ ಮೇರೆಗೆ ಕೇಂದ್ರದ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಅವರಿಗೆ ಅಲ್ಪಸಂಖ್ಯಾತ ವ್ಯವಹಾರಗಳ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ಮತ್ತೊಬ್ಬ, ಕ್ಯಾಬಿನೆಟ್ ದರ್ಜೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾಅವರಿಗೆ ಹೆಚ್ಚುವರಿಯಾಗಿ ಉಕ್ಕು ಖಾತೆಯ ಹೊಣೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT