ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಭಾರತ–ಮಾಲ್ದೀವ್ಸ್ ದ್ವಿಪಕ್ಷೀಯ ಸಹಕಾರದ ಬಗ್ಗೆ ಚರ್ಚೆ: ವಿದೇಶಾಂಗ ಸಚಿವಾಲಯ

Published 11 ಜೂನ್ 2024, 14:07 IST
Last Updated 11 ಜೂನ್ 2024, 14:07 IST
ಅಕ್ಷರ ಗಾತ್ರ

ಮಾಲೆ: ಮಾಲ್ದೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜು ಅವರು ಭಾರತಕ್ಕೆ ತೆರಳಿದ್ದ ಮೊದಲ ಅಧಿಕೃತ ಪ್ರವಾಸದ ವೇಳೆ ಎರಡೂ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸುವ ಮಾರ್ಗೋಪಾಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಇಲ್ಲಿನ ವಿದೇಶಾಂಗ ಸಚಿವಾಲಯ ಮಂಗಳವಾರ ಹೇಳಿದೆ.

ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಭೇಟಿ ನೀಡಿದ್ದ ಮುಯಿಜು ಮಂಗಳವಾರ ಬೆಳಿಗ್ಗೆ ಮಾಲ್ದೀವ್ಸ್‌ಗೆ ಹಿಂದಿರುಗಿದರು ಎಂದು ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ. 

‘ಆಹ್ವಾನಿತ ಗಣ್ಯರ ಗೌರವಾರ್ಥ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಏರ್ಪಡಿಸಿದ್ದ ಔತಣಕೂಟದಲ್ಲಿ ಮುಯಿಜು ಪಾಲ್ಗೊಂಡಿದ್ದರು. ಈ ವೇಳೆ ಉಭಯ ನಾಯಕರು ಭಾರತ ಮತ್ತು ಮಾಲ್ದೀವ್ಸ್ ನಡುವಿನ ಸಂಬಂಧ ವೃದ್ಧಿಯ ಬಗ್ಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮುರ್ಮು ಅವರು ಮಾಲ್ದೀವ್ಸ್‌ನ ಜನತೆ ಮತ್ತು ಇಲ್ಲಿನ ಹೊಸ ಸರ್ಕಾರಕ್ಕೆ ಶುಭ ಹಾರೈಸಿದರು’ ಎಂದು ಪ್ರಕಟಣೆ ತಿಳಿಸಿದೆ.

ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರೊಂದಿಗೂ ಮುಯಿಜು ಮಾತುಕತೆ ನಡೆಸಿದ್ದು, ಉಭಯ ರಾಷ್ಟ್ರಗಳು ಒಗ್ಗೂಡಿ ಕಾರ್ಯನಿರ್ವಹಿಸಲು ಮುಂದೆ ಬಂದಿವೆ ಎಂದು ಜೈಶಂಕರ್‌ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT