ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಿಳೆಯರ ಸುರಕ್ಷತೆ | ಪಶ್ಚಿಮ ಬಂಗಾಳ ಸರ್ಕಾರಕ್ಕೆ ಅಸಡ್ಡೆ: ಸಿಎಂ ಆದಿತ್ಯನಾಥ್

Published : 29 ಆಗಸ್ಟ್ 2024, 3:15 IST
Last Updated : 29 ಆಗಸ್ಟ್ 2024, 3:15 IST
ಫಾಲೋ ಮಾಡಿ
Comments

ಲಖನೌ: ಕೋಲ್ಕತ್ತ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ, ಕೊಲೆ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಳವಳ ವ್ಯಕ್ತಪಡಿಸಿರುವುದು ಮಹಿಳೆಯರ ಸುರಕ್ಷತೆಯ ಬಗ್ಗೆ ಪಶ್ಚಿಮ ಬಂಗಾಳ ಸರ್ಕಾರದ ಅಸಡ್ಡೆಯನ್ನು ತೋರಿಸುತ್ತದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ಕೋಲ್ಕತ್ತ ವೈದ್ಯ ವಿದ್ಯಾರ್ಥಿನಿ ಹತ್ಯೆ ಕುರಿತು ರಾಷ್ಟ್ರಪತಿ ಮುರ್ಮು ಅವರು ಕಳವಳ ವ್ಯಕ್ತಪಡಿಸಿರುವುದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರದಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಇರುವ ‘ಅಸಡ್ಡೆ ಮತ್ತು ಕ್ಷಮಿಸಲಾಗದ ತಪ್ಪನ್ನು ತೋರಿಸುತ್ತದೆ’ ಎಂದು ತಿಳಿಸಿದ್ದಾರೆ.

ಟಿಎಂಸಿ ಸರ್ಕಾರದ ಸರ್ವಾಧಿಕಾರಿ ಮತ್ತು ಮಹಿಳಾ ವಿರೋಧಿ ನಡವಳಿಕೆ ನಿಸ್ಸಂದೇಹವಾಗಿ ಪ್ರಜಾಪ್ರಭುತ್ವ, ಮಾನವೀಯತೆ ಮತ್ತು ಸುಸಂಸ್ಕೃತ ಸಮಾಜಕ್ಕೆ ಮಾಡಿರುವ ಅವಮಾನವಾಗಿದೆ. ಸ್ತ್ರೀ ಶಕ್ತಿಯನ್ನು ರಕ್ಷಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ಪಶ್ಚಿಮ ಬಂಗಾಳ ಸರ್ಕಾರ ತಕ್ಷಣವೇ ಮಹಿಳಾ ಮತ್ತು ದೇಶದ ಕ್ಷಮೆಯಾಚಿಸಬೇಕು ಎಂದು ಆದಿತ್ಯನಾಥ್‌ ಆಗ್ರಹಿಸಿದ್ದಾರೆ.

ಕೋಲ್ಕತ್ತ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ರಾಷ್ಟ್ರಪತಿ ದ್ರೌಪದಿ ಮರ್ಮು ಅವರು, ಕೃತ್ಯವನ್ನು ಕಟು ಶಬ್ದಗಳಲ್ಲಿ ಖಂಡಿಸಿದ್ದಾರೆ. ಮಹಿಳೆಯರ ಮೇಲಿನ ನಿರಂತರ ದೌರ್ಜನ್ಯಕ್ಕೆ ಕಳವಳ ವ್ಯಕ್ತಪಡಿಸಿದ್ದಾರೆ. ಮಹಿಳೆಯರ ವಿರುದ್ಧದ ಕೃತ್ಯಗಳನ್ನು ಬುಡಸಮೇತ ಕಿತ್ತುಹಾಕಲು ಆತ್ಮಾವಲೋಕನ ಅಗತ್ಯ ಎಂದು ಅವರು ಲೇಖನದಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT