ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್‌ಕೋಟ್‌ ಅಗ್ನಿದುರಂತ: ಮತ್ತೊಬ್ಬ ಪ್ರಮುಖ ವ್ಯಕ್ತಿ ಬಂಧನ

Published 28 ಮೇ 2024, 4:17 IST
Last Updated 28 ಮೇ 2024, 4:17 IST
ಅಕ್ಷರ ಗಾತ್ರ

ರಾಜ್‌ಕೋಟ್‌: ಗುಜರಾತ್‌ನ ರಾಜ್‌ಕೋಟ್‌ ನಗರದ ಟಿಆರ್‌ಪಿ ಗೇಮ್‌ ಜೋನ್‌ನಲ್ಲಿ ಶನಿವಾರ ನಡೆದ ಅಗ್ನಿ ಅನಾಹುತಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪ್ರಮುಖ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ದವಲ್‌ ಠಾಕೂರ್‌ ಎಂದು ಗುರುತಿಸಲಾಗಿದೆ. ಈತನ್ನು ರಾಜ್‌ಕೋಟ್‌ ಪೊಲೀಸರು ಭಾನುವಾರವೇ ಬಂಧಿಸಿದ್ದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. 

ಈ ಗೇಮ್ ಜೋನ್‌ಗೆ 6 ಮಂದಿ ಪಾಲುದಾರರು ಇದ್ದರು. ಇವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಅವರ ವಿರುದ್ದ ‘ಕೊಲ್ಲುವ ಉದ್ದೇಶ ಇಲ್ಲದಿದ್ದರೂ, ಜನರ ಸಾವಿಗೆ ಕಾರಣರಾದ ಆರೋಪ’ ಹೊರಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಈ ದುರಂತದಲ್ಲಿ ಮಕ್ಕಳು ಸೇರಿದಂತೆ 28 ಜನರು ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT