ನವೆದೆಹಲಿ (ಪಿಟಿಐ): ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಪರಿಣಾಮಗಳನ್ನು ಎದುರಿಸುವ ಕುರಿತು, ಚುನಾವಣೆ ಘೋಷಣೆಯಾಗಿರುವ ರಾಜ್ಯಗಳನ್ನು ಹೊರತುಪಡಿಸಿ ಉಳಿದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಸಂವಾದ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಕುರಿತಾಗಿ ಮೊದಲ ಬಾರಿಗೆ ಮುಖ್ಯಮಂತ್ರಿಗಳ ಜತೆ ಪ್ರಧಾನಿ ಅವರ ಸಂವಾದ ನಡೆಯಲಿದೆ.

‘ಯುದ್ಧದ ಪರಿಣಾಮಗಳನ್ನು ಎದುರಿಸಲು ಕೈಗೊಂಡಿರುವ ಸಿದ್ಧತೆಗಳು ಮತ್ತು ಯೋಜನೆಗಳ ಕುರಿತು ಪ್ರಧಾನಿ ಅವರು ಮುಖ್ಯಮಂತ್ರಿಗಳ ಜೊತೆ ಶುಕ್ರವಾರ ಸಂಜೆ ವಿಡಿಯೊ ಸಂವಾದ ನಡೆಸಲಿದ್ದಾರೆ’ ಎಂದು ಮೂಲಗಳು ಹೇಳಿವೆ.

ತಮಿಳುನಾಡು, ಪಶ್ಚಿಮಬಂಗಾಳ, ಅಸ್ಸಾಂ, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೆರಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಅಲ್ಲಿನ ಮುಖ್ಯಮಂತ್ರಿಗಳಿಗೆ ಸಭೆಗೆ ಆಹ್ವಾನ ನೀಡಿಲ್ಲ. ಅಲ್ಲಿನ ಮುಖ್ಯ ಕಾರ್ಯದರ್ಶಿಗಳ ಜೊತೆ ಸಂಪುಟ ಸಚಿವಾಲಯವು ಪ್ರತ್ಯೇಕ ಸಭೆ ನಡೆಸಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-51-887886377

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.