ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತ್ರಿಪುರಾ: ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗಿ

Last Updated 4 ಮಾರ್ಚ್ 2023, 15:28 IST
ಅಕ್ಷರ ಗಾತ್ರ

ಅಗರ್ತಲಾ (ಪಿಟಿಐ): ತ್ರಿಪುರಾದಲ್ಲಿ ಇದೇ 8ರಂದು ಬಿಜೆಪಿ–ಐಪಿಎಫ್‌ಟಿ ನೇತೃತ್ವದ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದ್ದು ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಹಿರಿಯ ಅಧಿಕಾರಿಗಳು ಶನಿವಾರ ತಿಳಿಸಿದರು.

ಈಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 32 ಸ್ಥಾನಗಳಲ್ಲಿ ಮತ್ತು ಐಪಿಎಫ್‌ಟಿ ಒಂದು ಸ್ಥಾನದಲ್ಲಿ ಗೆದ್ದಿತ್ತು.

‘ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯ ಕಾರ್ಯದರ್ಶಿ ಸಭೆ ನಡೆಸಿದ್ದಾರೆ. ಪ್ರಧಾನಿಗೆ ಭದ್ರತೆ ಒದಗಿಸಲು ಎಸ್‌ಪಿಜಿ ಕಮಾಂಡೊ ಸಹ ಬಂದಿಳಿದಿದೆ’ ಎಂದು ಅವರು ತಿಳಿಸಿದ್ದಾರೆ.

‘ಅಸ್ಸಾಂ ಮುಖ್ಯಮಂತ್ರಿ ಹಿಮಂತ್‌ ಬಿಸ್ವಾ ಶರ್ಮಾ, ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಪಕ್ಷದ ಹಿರಿಯ ನಾಯಕರು ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಇಲ್ಲಿನ ವಿವೇಕಾನಂದ ಮೈದಾನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ’ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ರೆಬತಿ ತ್ರಿಪುರಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT