ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೂರತ್ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟಿಸಿದ ಪ್ರಧಾನಿ ಮೋದಿ

Published 17 ಡಿಸೆಂಬರ್ 2023, 6:14 IST
Last Updated 17 ಡಿಸೆಂಬರ್ 2023, 6:14 IST
ಅಕ್ಷರ ಗಾತ್ರ

ಸೂರತ್: ಸೂರತ್ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಅನ್ನು ಪ್ರಧಾನಿ ನರೇಂದ್ರ ಮೋದಿ ಇಂದು (ಭಾನುವಾರ) ಉದ್ಘಾಟಿಸಿದರು.

ಸೂರತ್ ವಿಮಾನ ನಿಲ್ದಾಣದ ಸಮಗ್ರ ಟರ್ಮಿನಲ್ ಕಟ್ಟಡವನ್ನು ಸ್ಥಳೀಯ ಸಂಸ್ಕೃತಿ ಹಾಗೂ ಪರಂಪರೆಯೂಂದಿಗೆ ವಿನ್ಯಾಸಗೊಳಿಸಲಾಗಿದೆ. ಸೂರತ್‌ನ ಮೂಲಸೌಕರ್ಯ ಹಾಗೂ ವಾಣಿಜ್ಯ ವೃದ್ಧಿಗೆ ಇದರಿಂದ ನೆರವಾಗಲಿದೆ.

ಹೊಸ ಟರ್ಮಿನಲ್ ಪೀಕ್ ಅವರ್‌ನಲ್ಲಿ 1,200 ದೇಶೀಯ ಪ್ರಯಾಣಿಕರು ಮತ್ತು 600 ಅಂತರರಾಷ್ಟ್ರೀಯ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿದೆ.

ಈ ಮೊದಲು ಸೂರತ್ ವಿಮಾನ ನಿಲ್ದಾಣವನ್ನು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಘೋಷಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿತ್ತು. ನಗರದ ಸಂಪರ್ಕ ಹಾಗೂ ವಾಣಿಜ್ಯ ಕ್ಷೇತ್ರವನ್ನು ಉತ್ತೇಜಿಸಲು ಸಹಕಾರಿಯಾಗಲಿದೆ ಎಂದು ಪ್ರಧಾನಿ ಮೋದಿ ಶ್ಲಾಘನೆ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT