PHOTOS: ಗುಜರಾತ್ನಲ್ಲಿ ತಾಯಿ ಹೀರಾಬೆನ್ರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ
ಗುಜರಾತ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ತಮ್ಮ ತಾಯಿ ಹೀರಾಬೆನ್ ಅವರನ್ನು ಭೇಟಿಯಾಗಿದ್ದಾರೆ. ಇದೇ ವೇಳೆ ಮೋದಿ ಅವರು ಅಮ್ಮನೊಂದಿಗೆ ಕುಳಿತು ಊಟ ಮಾಡಿದ್ದಾರೆ.ಐದು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿದೆ. ಇದರ ಬೆನ್ನಲ್ಲೇ ಪ್ರಧಾನಿ ಮೋದಿ ಗುಜರಾತ್ಗೆ ತೆರಳಿದ್ದಾರೆ. ಗುಜರಾತ್ ಮೋದಿಯವರು ತವರು ರಾಜ್ಯವಾಗಿದ್ದು, ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.