ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮಮನೋಹರ ಲೋಹಿಯಾ ಜನ್ಮದಿನ: ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ

Last Updated 23 ಮಾರ್ಚ್ 2021, 7:36 IST
ಅಕ್ಷರ ಗಾತ್ರ

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ಮತ್ತು ಸಮಾಜವಾದಿ ನಾಯಕ ರಾಮಮನೋಹರ್‌ ಲೋಹಿಯಾ ಅವರ ಜನ್ಮದಿನದ ಅಂಗವಾಗಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಗೌರವ ನಮನ ಸಲ್ಲಿಸಿದ್ದಾರೆ.

1910 ರಲ್ಲಿ ಜನಿಸಿದ್ದ ಲೋಹಿಯಾ ಅವರು, 1967 ಅಕ್ಟೋಬರ್ 12 ರಂದು ನಿಧನರಾಗಿದ್ದಾರೆ.

ಲೋಹಿಯಾ ಅವರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ, ‘ಮಹಾನ್‌ ಸ್ವಾತಂತ್ರ್ಯ ಹೋರಾಟಗಾರ ಮತ್ತು ಸಮಾಜವಾದಿ ಚಿಂತಕ ಡಾ. ರಾಮಮನೋಹರ್ ಲೋಹಿಯಾ ಅವರ ಜನ್ಮ ದಿನಕ್ಕೆ ಗೌರವ ನಮನ ಸಲ್ಲಿಸುತ್ತೇನೆ’ ಎಂದು ಟ್ವೀಟ್‌ ಮಾಡಿದ್ದಾರೆ.

‘ಲೋಹಿಯಾ ಅವರು ತಮ್ಮ ತೀಕ್ಷ್ಣವಾದ ಮತ್ತು ಪ್ರಗತಿಪರ ಆಲೋಚನೆಗಳೊಂದಿಗೆ ದೇಶಕ್ಕೆ ಹೊಸ ನಿರ್ದೇಶನ ನೀಡಲು ಶ್ರಮಿಸಿದ್ದಾರೆ. ರಾಷ್ಟ್ರಕ್ಕೆ ಅವರು ನೀಡಿದ ಕೊಡುಗೆ ದೇಶದ ಜನರಿಗೆ ಸ್ಫೂರ್ತಿ ನೀಡುತ್ತದೆ’ ಎಂದು ಮೋದಿ ಹೇಳಿದ್ದಾರೆ.

‘ಮಹಾನ್‌ ಸಮಾಜವಾದಿ ನಾಯಕ, ಸ್ವಾತಂತ್ರ್ಯ ಹೋರಾಟಗಾರ ಮತ್ತು ರಾಷ್ಟ್ರೀಯವಾದಿ ಶ್ರೀ ರಾಮಮನೋಹರ್ ಲೋಹಿಯಾ ಅವರ ಜನ್ಮ ವಾರ್ಷಿಕೋತ್ಸವದಂದು ನನ್ನ ಗೌರವಪೂರ್ಣ ನಮನಗಳು. ಅವರು ದೂರದೃಷ್ಟಿಯ ಚಿಂತಕರು ಮತ್ತು ಶ್ರೇಷ್ಠ ಬಹರಗಾರರಾಗಿದ್ದರು’ ಎಂದು ವೆಂಕಯ್ಯ ನಾಯ್ಡು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT