ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ

ದೀಪಾವಳಿ ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಸಮೃದ್ಧಿ ತರಲಿ–ಬೆಳಕಿನ ಹಬ್ಬಕ್ಕೆ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ.
Published 12 ನವೆಂಬರ್ 2023, 5:02 IST
Last Updated 12 ನವೆಂಬರ್ 2023, 5:02 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಮನೆ ಮಾಡಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮ ಸೇರಿದಂತೆ ಹಲವು ಗಣ್ಯರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.

'ಎಲ್ಲರಿಗೂ ದೀಪಾವಳಿಯ ಶುಭಾಶಯಗಳು! ಈ ವಿಶೇಷ ಹಬ್ಬ ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಆರೋಗ್ಯವನ್ನು ತರಲಿ' ಎಂದು ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ರಾಷ್ಟ್ರದ ಜನತೆಗೆ ಶುಭಾಶಯ ಕೋರಿದ್ದಾರೆ. 'ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳು' ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಶುಭಾಶಯ ಕೋರಿದ ಯುಪಿ ಸಿಎಂ:

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ದೇಶದ ಜನರಿಗೆ ಶುಭಾಶಯ ಕೋರಿದ್ದಾರೆ. 'ಅಸತ್ಯದ ಮೇಲೆ ಸತ್ಯದ ವಿಜಯ, ಕತ್ತಲೆಯ ಮೇಲೆ ‌ಮೇಲೆ ಬೆಳಕಿನ ವಿಜಯ ಎಂಬ ಸಂದೇಶ ಸಾರುವ ದೀಪಾವಳಿಯಂದು ರಾಜ್ಯದ ಜನತೆಗೆ ಹೃತ್ಪೂರ್ವಕ ಶುಭಾಶಯಗಳು. ಭಗವಾನ್ ಶ್ರೀ ರಾಮ ಮತ್ತು ಮಾತಾ ಜಾನಕಿಯ ಆಶೀರ್ವಾದದೊಂದಿಗೆ ಈ ಪವಿತ್ರ ಹಬ್ಬ ನಿಮ್ಮೆಲ್ಲರ ಜೀವನದಲ್ಲಿ ಸಂತೋಷ, ಸಮೃದ್ಧಿ, ಅದೃಷ್ಟ ಮತ್ತು ಆರೋಗ್ಯವನ್ನು ತರಲಿ' ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

'ನಾಡಿನ ಸಮಸ್ತ ಜನತೆಗೆ ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯಗಳು. ಈ ಬೆಳಕಿನ ಹಬ್ಬ ನಿಮ್ಮೆಲ್ಲರ ಜೀವನದಲ್ಲಿ ಹೊಸ ಬೆಳಕು, ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ತರಲಿ' ಎಂದು ಗೃಹ ಸಚಿವ ಅಮಿತ್‌ ಶಾ ಪೋಸ್ಟ್‌ ಮಾಡಿದ್ದಾರೆ.

'ಬೆಳಕಿನ ಹಬ್ಬ ದೀಪಾವಳಿ ಅಜ್ಞಾನದ ಅಂಧಕಾರ ತೊಡೆದು ಸುಜ್ಞಾನದ ಬೆಳಕು ಹರಿಸಲಿ' ಎಂದು ಹಾರೈಸುತ್ತೇನೆ. ಹಣತೆಗಳನ್ನು ಬೆಳಗಿ, ಹಸಿರು ಪಟಾಕಿಗಳನ್ನು ಮಾತ್ರವೇ ಸಿಡಿಸಿ ಸುರಕ್ಷಿತವಾಗಿ ದೀಪಾವಳಿಯನ್ನು ಆಚರಿಸಿ. ನಾಡಿನ ಸಮಸ್ತ ಜನತೆಗೆ ದೀಪಾವಳಿಯ ಶುಭಾಶಯಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೋಸ್ಟ್‌ ಮಾಡಿದ್ದಾರೆ.

'ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಮೂಡಲಿ ಖುಷಿಯ ಚಿತ್ತಾರ, ದೂರವಾಗಲಿ ಬದುಕಿನ ಅಂಧಕಾರ, ತುಂಬಲಿ ಮನೆ ಮನಗಳಲ್ಲಿ ಸಡಗರ' ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ಪೋಸ್ಟ್‌ ಮಾಡಿದ್ದಾರೆ.

'ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಈ ಬೆಳಕಿನ ಹಬ್ಬವು ಎಲ್ಲರ ಜೀವನದಲ್ಲಿ ಸುಖ, ಸಂಭ್ರಮ, ಯಶಸ್ಸು ಮತ್ತು ಆರೋಗ್ಯದ ಬೆಳಕನ್ನು ಹೊತ್ತು ತರಲಿ ಎಂದು ಹಾರೈಸುತ್ತೇನೆ' ಎಂದು ಬಿ.ಎಸ್‌ ಯಡಿಯೂರಪ್ಪ ಹೇಳಿದ್ದಾರೆ.

'ನಾಡಿನ ಸಮಸ್ತ ಜನತೆಗೆ ನರಕ ಚತುರ್ದಶಿಯ ಹಾರ್ದಿಕ ಶುಭಾಶಯಗಳು. ದುಷ್ಟ ಶಕ್ತಿಗಳು ಹರಣವಾಗುವ ಸಂಕೇತವಾದ ಪವಿತ್ರ ನರಕ ಚತುರ್ದಶಿಯ ಸಂದರ್ಭದಲ್ಲಿ ಎಲ್ಲರ ಕಷ್ಟ - ನೋವುಗಳು ದೂರವಾಗಿ ಪ್ರೀತಿ, ಮಮತೆ, ವಿಶ್ವಾಸದ ದೀವಟಿಗೆಯು ಎಲ್ಲರ ಬಾಳಲ್ಲಿ ಬೆಳಗಲೆಂದು ಹಾರೈಸುತ್ತೇನೆ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ‌ ಪೋಸ್ಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT