ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ | ಖಾಸಗಿ ಬಸ್ ಪಲ್ಟಿ: ಇಬ್ಬರು ಸಾವು, 55 ಮಂದಿಗೆ ಗಾಯ

Published 30 ಡಿಸೆಂಬರ್ 2023, 10:22 IST
Last Updated 30 ಡಿಸೆಂಬರ್ 2023, 10:22 IST
ಅಕ್ಷರ ಗಾತ್ರ

ಮುಂಬೈ: ಪುಣೆ ಮೂಲದ ಸಂಸ್ಥೆಯೊಂದರ ಉದ್ಯೋಗಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್‌ವೊಂದು ಘಾಟಿ ಮಾರ್ಗದಲ್ಲಿ ಉರುಳಿದ ಪರಿಣಾಮ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, 55 ಮಂದಿ ಗಾಯಗೊಂಡಿದ್ದಾರೆ. ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಶನಿವಾರ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೊಸ ವರ್ಷದ ಸಂಭ್ರಮಾಚರಣೆಗಾಗಿ ಖಾಸಗಿ ಸಂಸ್ಥೆವೊಂದರ ಉದ್ಯೋಗಿಗಳು ಪುಣೆಯಿಂದ ಸುಮಾರು 170 ಕಿ.ಮೀ ದೂರದಲ್ಲಿರುವ ಹರಿಹರೇಶ್ವರಕ್ಕೆ ಬಸ್‌ನಲ್ಲಿ ತೆರಳುತ್ತಿದ್ದರು. ಇಂದು (ಶನಿವಾರ) ಬೆಳಿಗ್ಗೆ 7.30ರ ಸುಮಾರಿಗೆ ಮಂಗಾಂವ್‌ನ ತಹಮನಿ ಘಾಟಿ ಬಳಿ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಅಪಘಾತದಲ್ಲಿ ಇಬ್ಬರು ಮಹಿಳಾ ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಉಳಿದ 55 ಮಂದಿ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿತ್ತು. ಗಾಯಾಳುಗಳ ಪೈಕಿ 9 ಜನರ ತಲೆಗೆ ಗಂಭೀರ ಗಾಯವಾಗಿದ್ದರಿಂದ ಅವರನ್ನು ನವಿ ಮುಂಬೈನ ಎಂಜಿಎಂ ಆಸ್ಪತ್ರೆ ಮತ್ತು ಪುಣೆಯ ಸಸೂನ್ ಆಸ್ಪತ್ರೆಗೆ ಶಿಫಾರಸು ಮಾಡಲಾಗಿದೆ ಅವರು ತಿಳಿಸಿದ್ದಾರೆ.

ಅವಘಡದಿಂದಾಗಿ ರಸ್ತೆ ಸಂಚಾರ ಕೆಲಕಾಲ ಅಸ್ತವ್ಯಸ್ತಗೊಂಡಿತ್ತು. ಬಸ್‌ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT