ಶನಿವಾರ, 30 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಒಡೆದು ಆಳುವ ನೀತಿ ಅನುಸರಿಸುತ್ತಿದೆ: ಪ್ರಿಯಾಂಕಾ ಗಾಂಧಿ ಆರೋಪ

Published 9 ಆಗಸ್ಟ್ 2023, 15:55 IST
Last Updated 9 ಆಗಸ್ಟ್ 2023, 15:55 IST
ಅಕ್ಷರ ಗಾತ್ರ

ನವದೆಹಲಿ: ‘ಬಿಜೆಪಿಯು ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದೆ’ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕ್ವಿಟ್‌ ಇಂಡಿಯಾ ವಾರ್ಷಿಕೋತ್ಸವದ ದಿನವಾದ ಬುಧವಾರ ಆರೋಪಿಸಿದ್ದಾರೆ.

ಆಗಸ್ಟ್‌ ಕ್ರಾಂತಿ ದಿವಸ್ ಆಚರಣೆಯಲ್ಲಿ ಭಾಗವಹಿಸಿದ ಅವರು, ಸ್ವಾತಂತ್ಯ ಹೋರಾಟಗಾರರಿಗೆ ಗೌರವ ನಮನ ಸಲ್ಲಿಸಿದರು.‌ ಇದೇ ವೇಳೆ, ‘ದ್ವೇಷ, ಹಣದುಬ್ಬರ ಮತ್ತು ನಿರುದ್ಯೋಗವೇ ಭಾರತ ಬಿಟ್ಟು ತೊಲಗು’ ಎಂಬುದಾಗಿ ಹೇಳಿ ಎಂದು ಜನರನ್ನು ಒತ್ತಾಯಿಸಿದ್ದಾರೆ.

ಬಿಜೆಪಿ ವಿರುದ್ಧ ಆಕ್ರೋಶ: ‘ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದವರು ಅಥವಾ ಕ್ವಿಟ್ ಇಂಡಿಯಾ ಚಳವಳಿಯನ್ನು ಬೆಂಬಲಿಸದವರು ಅದರ ಬಗ್ಗೆ ಮಾತನಾಡುತ್ತಿರುವುದು ವಿಪರ್ಯಾಸ ಎನಿಸುತ್ತಿದೆ’ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಅವರು ಬುಧವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಮಣಿಪುರದ ಸಂಘರ್ಷದ ಬಗ್ಗೆ ಮೌನವಾಗಿರುವವರು ಭಾರತ ಬಿಟ್ಟು ತೊಲಗಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT