ಮಕ್ಕಳ ಶಿಕ್ಷಣಕ್ಕೆ ಅಗತ್ಯ ಕ್ರಮ
ವಯನಾಡ್ ಭೂಕುಸಿತದ ಸಂಕಷ್ಟಕ್ಕೆ ಸಿಲುಕಿದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕಾಂಗ್ರೆಸ್ ನೇತೃತ್ವದ ಯುಡಿಎಫ್ ಕೈಗೊಳ್ಳಲಿದೆ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಅವರು ಭರವಸೆ ನೀಡಿದ್ದಾರೆ. ಮುಂಡಕ್ಕೈ–ಚೂರಲ್‌ಮಲ ಪ್ರದೇಶಗಳಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕುಸಿತದಲ್ಲಿ ಬದುಕುಳಿದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿವೇತನ ವಿತರಣೆ ಮಾಡಿ ಅವರು ಈ ಭರವಸೆ ನೀಡಿದರು.