ಗುವಾಹಟಿ: ಮುಂಬರುವ ಅಸ್ಸಾಂ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸ್ಕ್ರೀನಿಂಗ್ ಸಮಿತಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಪ್ರಕಟಣೆ ಹೇಳಿದೆ.
.ಕೆಲಸದ ಅರ್ಧ ಸಮಯ ದೇಶದ ಹೊರಗೆ ಕಳೆದಿರುವ ಮೋದಿ: ಪ್ರಿಯಾಂಕಾ ಗಾಂಧಿ.
ಈ ವರ್ಷದ ಮೊದಲಾರ್ಧದಲ್ಲಿ ಚುನಾವಣೆ ನಡೆಯಲಿರುವ ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ಸ್ಕ್ರೀನಿಂಗ್ ಸಮಿತಿಯನ್ನು ರಚಿಸಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ ವೇಣುಗೋಪಾಲ್ ಪ್ರಕಟಣೆ ಹೊರಡಿಸಿದ್ದಾರೆ.

ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಹಾಗೂ ಪುದುಚೇರಿಯಲ್ಲಿ ನಡೆಯುವ ಚುನಾವಣೆಗೆ ಅಭ್ಯರ್ಥಿಗಳನ್ನು ಅಖೈರುಗೊಳಿಸಲು ನಾಲ್ವರು ಸದಸ್ಯರ ಸಮಿತಿ ರಚಿಸಲಾಗಿದೆ ಎಂದು ಪ್ರಟಕಣೆ ತಿಳಿಸಿದೆ.
.ಹರಿಯಾಣದಂತೆ ಬಿಹಾರದಲ್ಲೂ ಮತಗಳ್ಳತನ ಯತ್ನ ನಡೆಯುತ್ತಿದೆ: ಪ್ರಿಯಾಂಕಾ ಗಾಂಧಿ.
ಅಸ್ಸಾಂ ಕಾಂಗ್ರೆಸ್ ಸ್ಕ್ರಿನಿಂಗ್ ಸಮಿತಿ ಅಧ್ಯಕ್ಷೆಯಾಗಿ ಎಐಸಿಸಿ ಕಾರ್ಯದರ್ಶಿಯೂ, ಸಂಸದೆಯೂ ಆಗಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ನೇಮಕ ಮಾಡಲಾಗಿದೆ. ಅಲ್ಲಿ ಮಿತ್ರ ಪಕ್ಷಗಳೊಂದಿಗೆ ಕಾಂಗ್ರೆಸ್ ಚುನಾವಣೆ ಎದುರಿಸಲಿದೆ.

ಲೋಕಸಭಾ ಸಂಸದರಾದ ಇಮ್ರಾನ್ ಮಸೂದ್ ಹಾಗೂ ಸಪ್ತಗಿರಿ ಶಂಕರ್ ಉಲಕಾ ಮತ್ತು ಸಿರಿವೆಲ್ಲಾ ಪ್ರಸಾದ್ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.

126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಗೆ ಮಾರ್ಚ್-ಏಪ್ರಿಲ್ ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.
.ಭವಿಷ್ಯದಲ್ಲಿ ಚುನಾವಣೆ ನಡೆಯಬಹುದೇ ಎಂಬುದು ಅನುಮಾನ: ಪ್ರಿಯಾಂಕಾ ಗಾಂಧಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.