ಗುವಾಹಟಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ವಿರುದ್ಧ ಬುಧವಾರ ವಾಗ್ದಾಳಿ ನಡೆಸಿದರು.

‘ಸಂಪನ್ಮೂಲಭರಿತವಾದ ರಾಜ್ಯದಲ್ಲಿ ಜನರಿಗೆ ಏನೂ ಇಲ್ಲ, ಆದರೆ ಕುಟುಂಬವೊಂದು ಮಾತ್ರ ಎಲ್ಲವನ್ನೂ ಲೂಟಿ ಹೊಡೆಯುತ್ತಿದೆ’ ಎಂದು ಆರೋಪಿಸಿದರು.

ಸರಣಿ ಚುನಾವಣಾ ರ್ಯಾಲಿಗಳಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ‘ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಜನರನ್ನು ಬೆದರಿಸಿ ಆಡಳಿತ ನಡೆಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಶರ್ಮಾ ಅವರು ಹೇಡಿಗಳು’ ಎಂದು ಟೀಕಿಸಿದರು.

‘ಅಸ್ಸಾಂನಲ್ಲಿ ಒಂದು ಕುಟುಂಬವು ಎಲ್ಲವನ್ನೂ ಲೂಟಿ ಹೊಡೆಯುತ್ತಿದೆ. ಗಣಿ, ಭೂಮಿ ಮತ್ತಿತರ ಸಂಪನ್ಮೂಲಗಳನ್ನು ದೊಡ್ಡ ದೊಡ್ಡ ಕೈಗಾರಿಕೋದ್ಯಮಿಗಳಿಗೆ ಹಸ್ತಾಂತರಿಸಿದೆ’ ಎಂದು ದೂರಿದರು.

‘ಡಬಲ್ ಎಂಜಿನ್ ಸರ್ಕಾರ ಎಂದು ಬಿಜೆಪಿ ಹೇಳುತ್ತಿದೆ. ಆದರೆ ವಾಸ್ತವದಲ್ಲಿ ಅದು ಡಬಲ್ ಗುಲಾಮಿ ಸರ್ಕಾರ. ಅಮೆರಿಕದ ಸೇವೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮುಳುಗಿದ್ದಾರೆ, ಹಿಮಂತ ಬಿಸ್ವಾ ಶರ್ಮಾ ಅವರು ಮೋದಿ ಸೇವೆಯಲ್ಲಿ ತೊಡಗಿದ್ದಾರೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.