ಶನಿವಾರ, 9 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಪಕ್ಷದ ‘ನಾ ನಾಯಕಿ’ ಸಮಾವೇಶಕ್ಕೆ ಪ್ರಿಯಾಂಕಾ ಗಾಂಧಿ -ಡಿ.ಕೆ.ಶಿವಕುಮಾರ್

Last Updated 9 ಜನವರಿ 2023, 11:30 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದ ಮಹಿಳೆಯರ ಸಬಲೀಕರಣ ಉದ್ದೇಶದಿಂದ ಕಾಂಗ್ರೆಸ್ ಪಕ್ಷದ ವತಿಯಿಂದ ಇದೇ 16ರಂದು ಅರಮನೆ ಮೈದಾನದಲ್ಲಿ ‘ನಾ ನಾಯಕಿ’ ಸಮಾವೇಶ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಭಾಗವಹಿಸಲಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.

ಇತರ ಪಕ್ಷಗಳ ನಾಯಕರನ್ನು ಕೆಪಿಸಿಸಿ ಕಚೇರಿಯಲ್ಲಿ ಪಕ್ಷಕ್ಕೆ ಸೋಮವಾರ ಸೇರ್ಪಡೆ ಮಾಡಿಕೊಂಡ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಗ್ರಾಮ ಪಂಚಾಯಿತಿ, ಸಹಕಾರ ಸಂಘಗಳಲ್ಲಿ ಸ್ಪರ್ಧಿಸಿದ ಮಹಿಳಾ ನಾಯಕಿಯರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ ಪ್ರತಿ ಬೂತ್, ಪಂಚಾಯಿತಿಗಳಿಂದ ಕನಿಷ್ಠ 3ರಿಂದ 10 ಹೆಣ್ಣು ಮಕ್ಕಳು ಭಾಗವಹಿಸಬೇಕು’ ಎಂದು ಅವರು ಆಹ್ವಾನ ನೀಡಿದರು.

‘ಹೆಣ್ಣು ಸಮಾಜದ ಶಕ್ತಿಯಾಗಿದ್ದು, ಅವರ ಸಬಲೀಕರಣಕ್ಕೆ ಸಮಾವೇಶ ಹಮ್ಮಿಕೊಂಡಿದ್ದೇವೆ. ಈ ಸಮಾವೇಶಕ್ಕೆ ರಾಷ್ಟ್ರೀಯ ನಾಯಕರನ್ನು ಆಹ್ವಾನಿಸಿದ್ದೇವೆ. ಈಗಾಗಲೇ ಸಾವಿರಾರು ಸಲಹೆಗಳು ಬಂದಿವೆ. ಅವುಗಳನ್ನು ಒಂದು ಸಮಿತಿ ಪರಿಶೀಲನೆ ನಡೆಸುತ್ತಿದೆ. ಮಹಿಳೆಯರಿಗೆ ಪಕ್ಷ ನೀಡುವ ಭರವಸೆಗಳನ್ನು ಸಮಾವೇಶದಲ್ಲಿ ಪ್ರಿಯಾಂಕಾ ಘೋಷಣೆ ಮಾಡಲಿದ್ದಾರೆ’ ಎಂದೂ ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT