ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Bilkis Bano Case: ಸುಪ್ರೀಂ ಕೋರ್ಟ್‌ ತೀರ್ಪು ಸ್ವಾಗತಿಸಿದ ಮಮತಾ, ಪ್ರಿಯಾಂಕಾ

Published 8 ಜನವರಿ 2024, 12:39 IST
Last Updated 8 ಜನವರಿ 2024, 12:39 IST
ಅಕ್ಷರ ಗಾತ್ರ

ನವದೆಹಲಿ: ಬಿಲ್ಕಿಸ್‌ ಬಾನು ಪ್ರಕರಣದ 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆಯನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌ ತೀರ್ಪನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಸ್ವಾಗತಿಸಿದ್ದಾರೆ.

ಸುಪ್ರೀಂ ಕೋರ್ಟ್‌ ತೀರ್ಪನ್ನು ‘ನೇರ ಹಾಗೂ ದಿಟ್ಟ’ ಎಂದು ಮಮತಾ ಬ್ಯಾನರ್ಜಿ ಕರೆದರೆ, ಬಿಜೆಪಿಯ ಮಹಿಳಾ ವಿರೋಧಿ ನೀತಿಗಳ ಮೇಲಿನ ಮುಸುಕು ಕಳಚಿದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

‘ಕೊನೆಗೂ ನ್ಯಾಯಕ್ಕೆ ಜಯ ಸಿಕ್ಕಿದೆ. 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆಯನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದೆ. ಆ ಮೂಲಕ ಬಿಜೆಪಿಯ ಮಹಿಳಾ ವಿರೋಧಿ ನೀತಿಗಳ ಮೇಲಿನ ಮುಸುಕನ್ನು ಕಳಚಿದೆ. ನ್ಯಾಯಾಲಯದ ಮೇಲೆ ಜನರಿಗಿದ್ದ ನಂಬಿಕೆ ಮತ್ತಷ್ಟು ಹೆಚ್ಚಿದೆ’ ಎಂದು ಪ್ರಿಯಾಂಕಾ ಗಾಂಧಿ ಎಕ್ಸ್‌ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ‘ಬಲವಾದ ಮತ್ತು ದಿಟ್ಟ ತೀರ್ಪನ್ನು ತೆಗೆದುಕೊಂಡಿದ್ದಕ್ಕಾಗಿ ಸುಪ್ರೀಂ ಕೋರ್ಟ್‌ಗೆ ನಾನು ಕೃತಜ್ಞಳಾಗಿದ್ದೇನೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT